Log In
BREAKING NEWS >
ಕೊಪ್ಪಳದಲ್ಲಿ ಮುಂಜಾನೆ ಭಾರಿ ಮಳೆ: ಜನಜೀವನ ಅಸ್ತವ್ಯಸ್ತ....

“ಅಯೋಗ್ಯ’ನ ನಾಯಕಿಯಾಗಿ ರಚಿತಾ ರಾಮ್‌!

ಸತೀಶ್‌ ನೀನಾಸಂ ಅಭಿನಯದ “ಅಯೋಗ್ಯ’ ಎಂಬ ಹೊಸ ಚಿತ್ರಕ್ಕೆ ನಾಯಕಿ ಯಾರಾಗಬಹುದು ಎಂಬ ಕುತೂಹಲ ಎಲ್ಲರಲ್ಲೂ ಇತ್ತು. ಇದಕ್ಕೂ ಮುನ್ನ ಐಂದ್ರಿತಾ ರೇ ನಾಯಕಿಯಾಗಬಹುದು ಎಂಬ ಸುದ್ದಿ ಇತ್ತು. ಆಮೇಲೆ “ಗಾಂಧಾರಿ’ ಖ್ಯಾತಿಯ ಕಾವ್ಯ ಗೌಡ ನಟಿಸಬಹುದು ಎಂಬ ಸುದ್ದಿ ಬಂತು. ಇದೀಗ ನಾಯಕಿ ಫಿಕ್ಸ್‌ ಆಗಿದೆ. “ಅಯೋಗ್ಯ’ ಚಿತ್ರಕ್ಕೆ ನಾಯಕಿಯಾಗಿ ರಚಿತಾ ರಾಮ್‌ ಆಯ್ಕೆಯಾಗಿದ್ದಾರೆ.

“ಅಯೋಗ್ಯ’ ಚಿತ್ರದ ಮುಹೂರ್ತ ವರಮಹಾಲಕ್ಷ್ಮೀ ಹಬ್ಬದಂದು ನಡೆದು, ಚಿತ್ರೀಕರಣ ಇನ್ನಷ್ಟೇ ಶುರುವಾಗಬೇಕಿದೆ. ಈ ಚಿತ್ರದಲ್ಲಿ ಗ್ರಾಮ ಪಂಚಾಯ್ತಿ ಸದಸ್ಯನ ಪಾತ್ರದಲ್ಲಿ ಸತೀಶ್‌ ನೀನಾಸಂ ಕಾಣಿಸಿಕೊಳ್ಳಲಿದ್ದಾರೆ. ಅಯೋಗ್ಯನೊಬ್ಬ ಗ್ರಾಮ ಪಂಚಾಯ್ತಿ ಸದಸ್ಯನಾಗಿ ಹೇಗೆ ಯೋಗ್ಯನಾಗಿ ಬದಲಾಗುತ್ತಾನೆ ಎನ್ನುವುದು ಕಥೆ. ಇನ್ನು ರಚಿತಾ ರಾಮ್‌ ಅವರು ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳಿದ್ದಾರೆ. ಚಿತ್ರದ ಚಿತ್ರೀಕರಣ ಮುಂದಿನ ತಿಂಗಳು ಶುರುವಾಗಲಿದ್ದು, ಮಂಡ್ಯ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

“ಅಯೋಗ್ಯ’ ಚಿತ್ರವನ್ನು ಯೋಗರಾಜ್‌ ಭಟ್‌ ಶಿಷ್ಯ ಮಹೇಶ್‌ ನಿರ್ದೇಶಿಸುತ್ತಿದ್ದಾರೆ. ಚಿತ್ರಕ್ಕೆ ಕಥೆ ಮತ್ತು ಚಿತ್ರಕಥೆ ಸಹ ಅವರದ್ದೇ. ಸುರೇಶ್‌ ಅವರು ಈ ಚಿತ್ರವನ್ನು ನಿರ್ಮಿಸಿದರೆ, ವಿ. ಹರಿಕೃಷ್ಣ ಸಂಗೀತ ಸಂಯೋಜಿಸುತ್ತಿದ್ದಾರೆ. ಪ್ರೀತಮ್‌ ತೆಗ್ಗಿನಮನೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಮಿಕ್ಕಂತೆ ಚಿತ್ರದಲ್ಲಿ ಚಿಕ್ಕಣ್ಣ, ಶಿವರಾಜ್‌ ಕೆ.ಆರ್‌. ಪೇಟೆ, ಸರಿತ, ರವಿಶಂಕರ್‌, ರಂಗಾಯಣ ರಘು, ತಬಲಾ ನಾಣಿ, ಸಾಧು ಕೋಕಿಲ, ಬುಲೆಟ್‌ ಪ್ರಕಾಶ್‌, ಕುರಿ ಪ್ರತಾಪ್‌ ಸೇರಿದಂತೆ ಹಲವರು ನಟಿಸುತ್ತಿದ್ದಾರೆ.

No Comments

Leave A Comment