Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಅಸಭ್ಯ ವರ್ತನೆ: ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ರಮೇಶ್‌ ರಾಜೀನಾಮೆ

ಮಡಿಕೇರಿ::  ಕೊಡಗು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಟಿ.ಪಿ. ರಮೇಶ್‌ ರೇಷ್ಮೆ ಮಾರಾಟ ಮಂಡಳಿಯ ಅಧ್ಯಕ್ಷಸ್ಥಾನಕ್ಕೆ ಮಂಗಳವಾರ ರಾಜೀನಾಮೆ ನೀಡಿದ್ದಾರೆ.

ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್‌. ಸೀತಾರಾಂ ಸೂಚನೆ ಮೇರೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ರಾಜೀನಾಮೆ ಪತ್ರ ನೀಡಿದ ರಮೇಶ್ ಕಾಂಗ್ರೆಸ್‌ ನ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ.

ರಾಜೀನಾಮೆ ನೀಡಿದ ಬಳಿಕ ರಮೇಶ್ ‘ಆಗಸ್ಟ್‌ 15ರಂದು ಮಡಿಕೇರಿ ಹಳೆಯ ಕೋಟೆ ಆವರಣದ ಸ್ವಾತಂತ್ರ್ಯ ದಿನಾಚರಣೆ ವೇದಿಕೆಯಲ್ಲಿ ನಡೆದ ಘಟನೆಯ ಸತ್ಯಾಂಶದ ವರದಿಯನ್ನೂ ಈ ಪತ್ರದೊಂದಿಗೆ ಲಗತ್ತಿಸಿದ್ದೇನೆ. 40 ವರ್ಷದ ರಾಜಕೀಯ ಜೀವನದಲ್ಲಿ ಸಹೋದರಿಯ ಯೋಗಕ್ಷೇಮ ವಿಚಾರಿಸಿದ್ದು ಪಕ್ಷದ ದೃಷ್ಟಿಯಲ್ಲಿ ತಪ್ಪೆಂದರೆ ನನ್ನಂತಹ ಹಿರಿಯರು ಬದುಕುವುದು ಕಷ್ಟಕರ’ ಎಂದು ದಿನೇಶ್ ಗುಂಡೂರಾವ್ ಅವರಿಗೆ ಬರೆದ ಪತ್ರದಲ್ಲಿ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ.

ಮೊನ್ನೆಯಷ್ಟೆ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ರಮೇಶ್ ಅವರು ಎಂಎಸ್‌ಸಿ ವೀಣಾ ಅಚ್ಚಯ್ಯ ಅವರ ಕೈಹಿಡಿದು ಅಸಭ್ಯವಾಗಿ ವರ್ತಿಸಿದ್ದ ಪ್ರಕರಣದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿ ಸಾರ್ವಜನಿಕ ವಲಯದಲ್ಲಿ ಆಕ್ಷೇಪ ವ್ಯಕ್ತವಾಗಿತ್ತು.

No Comments

Leave A Comment