Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಬೆಂಗಳೂರಿನಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ: ಚಿಕಿತ್ಸೆ ಫಲಿಸದೇ 4 ವರ್ಷದ ಬಾಲಕಿ ಸಾವು

ಬೆಂಗಳೂರು:  ಅಪ್ರಾಪ್ತೆ ಮೇಲೆ  ವಿವಾಹಿತ ವ್ಯಕ್ತಿ ಲೈಂಗಿಕ ದೌರ್ಜನ್ಯ ನಡೆಸಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಆಗಸ್ಟ್ 17 ರಂದು ನಾಲ್ಕು ವರ್ಷದ ಬಾಲಕಿ ಮೇಲೆ ಸಾಕು ತಂದೆ ಅತ್ಯಾಚಾರವೆಸಗಿದ್ದ. ಆನಂತರ ತೀವ್ರ ರಕ್ತಸ್ರಾವವಾಗುತ್ತಿದ್ದ ಹಿನ್ನೆಲೆಯಲ್ಲಿ ಬಾಲಕಿಯನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಬೆಳಗಿನ ಜಾವ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ.  ಈ ಸಂಬಂಧ ತಲಘಟ್ಟಪುರ ಠಾಣೆಯಲ್ಲಿ ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಾಗಿದೆ.

ಬಾಲಕಿಯು ಪರಿಚಿತರಾದ ಮಲ್ಲಿಕಾರ್ಜುನ್ ಮತ್ತು ಚಂದನಾ ಮನೆಯಲ್ಲಿ ವಾಸವಿದ್ದಳು. ದಂಪತಿ ಬಾಲಕಿಗೆ ಆಗಾಗ ಹಿಂಸೆ ನೀಡುತ್ತಿದ್ದರು. ಸರಿಯಾದ ಸಮಯಕ್ಕೆ ಬಾಲಕಿಗೆ ಊಟ ತಿಂಡಿ ನೀಡದೆ ಆಗಸ್ಟ್ 17ರಂದು ಬಾಲಕಿ ಮೇಲೆ ಹಲ್ಲೆ ನಡೆಸಿದ್ದರು. ಮನೆಯಲ್ಲಿ ಯಾರೂ ಇ‌ಲ್ಲದ ‌ವೇಳೆ ‌ತಿಂಡಿ ಕೊಡಿಸುವ ನೆಪದಲ್ಲಿ ‌ಸಾಕು ತಂದೆ ಮಲ್ಲಿಕಾರ್ಜುನ್‌ ಅತ್ಯಾಚಾರ ಎಸಗಿದ್ದ ಎನ್ನಲಾಗಿದೆ.

No Comments

Leave A Comment