Log In
BREAKING NEWS >
ಕರಾವಳಿಯಲ್ಲಿ ಭಾರೀ ಮಳೆ-ಹಲವೆಡೆಯಲ್ಲಿ ನೆರೆ...ಜೂನ್ 22ರ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಅನುಗ್ರಹ ಲಕ್ಷ್ಮೀವೃತ ಕಾರ್ಯಕ್ರಮವು ಜರಗಲಿದೆ....

ನಂಬಿಕೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಂಡರೆ ಸೂಕ್ತ ಕ್ರಮ

ಹೊಸದಿಲ್ಲಿ : ಡೇರಾ ಸಚ್ಚಾ ಸೌದಾ ಮುಖ್ಯಸ್ಥ  ರಾಮ್‌ ರಹೀಮ್‌ ಸಿಂಗ್‌ ಅತ್ಯಾಚಾರ ಅಪರಾಧಿಯಾಗಿ ಜೈಲು ಪಾಲಾದ ಬೆನ್ನಲ್ಲೇ ವ್ಯಾಪಕ ಹಿಂಸಾಚಾರಕ್ಕಿಳಿದರುವ ಬೆಂಬಲಿಗರಿಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಕಠಿಣ ಎಚ್ಚರಿಕೆ ನೀಡಿದ್ದಾರೆ.

ಜನಪ್ರಿಯ ರೆಡಿಯೋ ಕಾರ್ಯಕ್ರಮ ಮನ್‌ ಕೀ ಬಾತ್‌ನಲ್ಲಿ ದೇಶವಾಸಿಗಳನ್ನುದ್ದೇಶಿಸಿ ಮಾತನಾಡಿದ ಮೋದಿ ‘ನಮ್ಮ ದೇಶದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ. ಅಹಿಂಸಾ ಪರಮೋ ಧರ್ಮ ನಮ್ಮ ಧ್ಯೇಯ’ ಎಂದರು.

‘ನಂಬಿಕೆ ಹೆಸರಲ್ಲಿ ಕಾನೂನು ಕೈಗೆತ್ತಿಕೊಳ್ಳುವ ಹಕ್ಕು ಯಾರಿಗೂ ಇಲ್ಲ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಅಪರಾಧಿಗಳಿಗೆ ಕಾನೂನು  ಶಿಕ್ಷೆ ನೀಡುತ್ತದೆ’ ಎಂದರು.

No Comments

Leave A Comment