Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ....ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಸಂಪುಟ ವಿಸ್ತರಣೆ: ಗೀತಾ ಮಹಾದೇವ ಪ್ರಸಾದ್, ಹೆಚ್ಎಂ ರೇವಣ್ಣ, ತಿಮ್ಮಾಪುರಗೆ ಸ್ಥಾನ

ಬೆಂಗಳೂರು: ಅಂತೂ ಇಂತೂ ಸಿದ್ದರಾಮಯ್ಯ ಸರ್ಕಾರದ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ಥ ಫಿಕ್ಸ್ ಆಗಿದೆ. ನಾಳೆ ಸಂಜೆ 5 ಗಂಟೆಗೆ ರಾಜ ಭವನದಲ್ಲಿ ನೂತನ ಸಚಿವರ ಪ್ರಮಾಣ ವಚನ ಕಾರ್ಯಕ್ರಮ ನಡೆಯಲಿದೆ.

ವಿಧಾನ ಪರಿಷತ್ ಸದಸ್ಯ ಎಚ್. ಎಂ ರೇವಣ್ಣ, ಆರ್. ಬಿ ತಿಮ್ಮಾಪುರ, ಮತ್ತು ಗೀತಾ ಮಹಾದೇವ ಪ್ರಸಾದ್ ನಾಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಸಂಪುಟ ವಿಸ್ತರಣೆಗೆ ಹಲವರ ಹೆಸರು ಕೇಳಿ ಬಂದಿದ್ದವು. ಕೊನೆ ಕ್ಷಣದಲ್ಲಿ  ಮಾಜಿ ಸಚಿವ ದಿವಂಗತ ಮಹಾದೇವ ಪ್ರಸಾದ್ ಅವರ ಪತ್ನಿ ಗೀತಾ ಅವರಿಗೆ ಅವಕಾಶ ನೀಡಲಾಗಿದೆ.

ರಾಜ್ಯಪಾಲರಾದ ವಜುಭಾಯಿ ವಾಲಾನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಲಿದ್ದಾರೆ. ಮಹದೇವಪ್ಪ ನಿಧನದಿಂದ ಒಂದು ಸ್ಥಾನ ತೆರವಾಗಿದ್ದರೆ, ಎಚ್.ವೈ.ಮೇಟಿ ಮತ್ತು ಡಾ.ಜಿ.ಪರಮೇಶ್ವರ ಅವರ ರಾಜೀನಾಮೆಯಿಂದ ಎರಡು ಸ್ಥಾನಗಳು ತೆರವಾಗಿದ್ದವು.

No Comments

Leave A Comment