Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ನಟ ದರ್ಶನ್ ಕಾಂಗ್ರೆಸ್ ಮೂಲಕ ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ?

ಬೆಂಗಳೂರು:ಸ್ಯಾಂಡಲ್ ವುಡ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಾಜಕೀಯಕ್ಕೆ ಸೇರ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಆದರೆ ದರ್ಶನ್ ಯಾವುದೇ ರಾಜಕೀಯ ಪಕ್ಷಕ್ಕೆ ಸೇರ್ಪಡೆಗೊಳ್ಳೋದಿಲ್ಲ ಎಂದು ಆಪ್ತ ಮೂಲಗಳು ತಿಳಿಸಿರುವುದಾಗಿ ಖಾಸಗಿ ಚಾನೆಲ್ ವರದಿ ಮಾಡಿದೆ.

ನಟ ದರ್ಶನ್ ಕಾಂಗ್ರೆಸ್ ಪಕ್ಷ ಸೇರ್ತಾರೆ ಎನ್ನೋದು ಸುಳ್ಳು ಸುದ್ದಿ ಎಂದು ಆಪ್ತ ಮೂಲಗಳು ಹೇಳಿರುವುದಾಗಿ ವರದಿ ವಿವರಿಸಿದೆ. ದರ್ಶನ್ ಅವರು ರಾಜಕೀಯ ಪಕ್ಷದ ಅಭ್ಯರ್ಥಿಯಾಗಲ್ಲ, ಆದರೆ ಅವರು ಅಭ್ಯರ್ಥಿಗಳ ಪರ ಪ್ರಚಾರ ನಡೆಸುತ್ತಾರೆ ಎಂದು ಮೂಲಗಳು ತಿಳಿಸಿವೆ.

ಏತನ್ಮಧ್ಯೆ ನಟ ದರ್ಶನ್ ಅವರು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಯಾವುದೇ ಮಾತುಕತೆ ನಡೆದಿಲ್ಲ, ಅವರ ತಾಯಿ ಮೀನಾ ತೂಗುದೀಪ್ ಅವರು ಕೆಪಿಸಿಸಿ ಕಾರ್ಯದರ್ಶಿಯಾಗಿದ್ದಾರೆ. ಒಂದು ವೇಳೆ ದರ್ಶನ್ ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರೆ ನಮಗೂ ಸಂತೋಷ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಪರಮೇಶ್ವರ್ ತಿಳಿಸಿದ್ದಾರೆ.

ಪ್ರತಿಕ್ರಿಯೆಗೆ ನಕಾರ:

ರಾಜಕೀಯ ಸೇರ್ಪಡೆ ಕುರಿತು ನಟ ದರ್ಶನ್ ಅವರನ್ನು ಸುದ್ದಿಗಾರರು ಪ್ರಶ್ನಿಸಿದಾಗ, ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

No Comments

Leave A Comment