Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಹೇಮಾವತಿ ಹೋರಾಟ : ತುಮಕೂರಿನಲ್ಲಿ ರೈತ ಆತ್ಮಹತ್ಯೆ

ತುಮಕೂರು : ಹೇಮಾವತಿ ನೀರಿಗಾಗಿ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು ಗುರುವಾರ ಗುಬ್ಬಿ ತಾಲೂಕಿನ ಸೋಮಲಾಪುರದಲ್ಲಿ ರೈತನೊಬ್ಬ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಕಾಲುವೆಯ ತೂಬು ಮುಚ್ಚಲು ಪೊಲೀಸರು ಮುಂದಾದುದನ್ನು ಪ್ರತಿಭಟಿಸಿ ಚೆಲುವರಾಜು (35) ಎಂಬ ರೈತ ಕಾಲುವೆಗೆ ಹಾರಿದ್ದು  ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.

ಕೊಚ್ಚಿಹೋಗಿರುವ ರೈತನ ಶವಕ್ಕಾಗಿ ತೀವ್ರ ಶೋಧ ನಡೆಸಲಾಗುತ್ತಿದೆ. ಪೊಲೀಸರ ವಿರುದ್ಧ ರೈತರ ಆಕ್ರೋಶ ಇನ್ನಷ್ಟು ಹೆಚ್ಚಾಗಿದೆ.

ಹೇಮಾವತಿ ನಾಲೆಗೆ ರೈತರು ನೀರೆತ್ತಲು ಅಕ್ರಮವಾಗಿ ಅಳವಡಿಸಿದ್ದ ಮೋಟಾರ್‌ ಪಂಪ್‌ ಗಳನ್ನು ತೆರವುಗೊಳಿಸಲಾಗಿದೆ. ಈ ಬಗ್ಗೆ ರೈತರು ಜಾನುವಾರುಗಳಿಗೆ ನೀರಿಲ್ಲದೆ ಪರದಾಡುತ್ತಿದ್ದು ತೀವ್ರ ಆಕ್ರೋಶ ಹೊರಹಾಕಿದ್ದಾರೆ.

No Comments

Leave A Comment