Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಸೆ.27ರಿ೦ದ ಮೊದಲ್ಗೊ೦ಡು ಅಕ್ಟೋಬರ್ 2 ರವರೆಗೆ ಶ್ರೀಶಾರದಾ ಮಹೋತ್ಸವ ಕಾರ್ಯಕ್ರಮ ಜರಗಲಿದೆ ಎ೦ದು ಶ್ರೀಶಾರದಾ ಮಹೋತ್ಸವ ಸಮಿತಿಯ ಪ್ರಕಟಣೆ ತಿಳಿಸಿದೆ.....

ಪುರುಷರ ಹಾಕಿ ತಂಡದ ಮುಖ್ಯ ಕೋಚ್‌ ರೋಲಂಟ್ ಓಲ್ಟಮಸ್‌ ವಜಾ

ನವದೆಹಲಿ: ಭಾರತ ಪುರುಷರ ಹಾಕಿ ತಂಡದ ಮುಖ್ಯ ಕೋಚ್‌ ಹುದ್ದೆಯಿಂದ ರೋಲಂಟ್‌ ಓಲ್ಟಮಸ್‌ ಅವರನ್ನು ಹಾಕಿ ಇಂಡಿಯಾ ವಜಾಗೊಳಿಸಿದೆ.

ಹಾಕಿ ಇಂಡಿಯಾ ಸಂಸ್ಥೆಯು ಶನಿವಾರ ಈ ನಿರ್ಧಾರ ಪ್ರಕಟಿಸಿದೆ. ‘ಅಂತರರಾಷ್ಟ್ರೀಯ ಪಂದ್ಯಗಳಲ್ಲಿ ಪುರುಷರ ಹಾಕಿ ತಂಡ ನಿರೀಕ್ಷಿತ ರೀತಿಯಲ್ಲಿ ‍ಪ್ರದರ್ಶನ ನೀಡುತ್ತಿಲ್ಲ. ಹೀಗಾಗಿ ಕೋಚ್‌ ರೋಲಂಟ್ ಓಲ್ಟಮಸ್‌ ಅವರನ್ನು ಹುದ್ದೆಯಿಂದ ಕೆಳಗಿಸಲಾಗುತ್ತಿದೆ’ ಎಂದು ಹಾಕಿ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ.

ಹಾಕಿ ಇಂಡಿಯಾದ 24 ಮಂದಿ ಸದಸ್ಯರು ಕಳೆದ ಮೂರು ದಿನಗಳಿಂದ ನಡೆಸಿದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ. ಕಳೆದ ವರ್ಷದ ಪ್ರದರ್ಶನಕ್ಕೆ ಹೋಲಿಸಿದರೆ ಈ ವರ್ಷದ ಪ್ರದರ್ಶನ ನಿರೀಕ್ಷಿತ ಮಟ್ಟದಲ್ಲಿಲ್ಲ. 2018ರ ಹಾಕಿ ವಿಶ್ವ ಕಪ್‌ ಮತ್ತು 2020ರ ಒಲಿಂಪಿಕ್ಸ್‌ ಪಂದ್ಯಗಳನ್ನು ಗಮನದಲ್ಲಿರಿಸಿಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.

ಮುಖ್ಯ ಕೋಚ್‌ ಹುದ್ದೆಗೆ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುವವರೆಗೂ ಹಾಕಿ ಇಂಡಿಯಾದ ಉನ್ನತ ಪ್ರದರ್ಶನ ಸಮಿತಿಯ ನಿರ್ದೇಶಕ ಡೇವಿಡ್‌ ಜಾನ್‌ ಅವರು ತಾತ್ಕಾಲಿಕವಾಗಿ ಕೋಚ್‌ ಹುದ್ದೆ ನಿಭಾಯಿಸಲಿದ್ದಾರೆ.

No Comments

Leave A Comment