Log In
BREAKING NEWS >
ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿ ಶಿರೂರು ಶ್ರೀನಾಮಪತ್ರ ಸಲ್ಲಿಕೆ.....ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ತಾಯಿ ಹಾಗೂ ಸಹೋದರನ ಎದುರೇ 11 ವರ್ಷದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾ

ಭೋಪಾಲ್‌: ತಾಯಿ ಹಾಗೂ ಸಹೋದರನ ಎದುರೇ 11 ವರ್ಷದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ವೆಸಗಿರುವ ಘಟನೆ ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ನಡೆದಿದೆ.

ಕಳೆದ ಬುಧವಾರ ಬಾಲಕಿ ಮನೆಯಲ್ಲಿದ್ದ ಸಂದರ್ಭದಲ್ಲಿ ಮಧ್ಯರಾತ್ರಿ 1ರ ಸುಮಾರಿಗೆ ಮೂವರು ಕಾಮುಕರು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಇಬ್ಬರು ದುಷ್ಕರ್ಮಿಗಳು ತಾಯಿ ಮತ್ತು 14 ವರ್ಷದ ಮಗನನ್ನು ಬದೂಕಿನಿಂದ ಶೂಟ್‌ ಮಾಡುವುದಾಗಿ ಬೆದರಿಸಿದ್ದಾರೆ. ಮತ್ತೊಬ್ಬ ಬಾಲಕಿಯ ಮೇಲೆ ಅತ್ಯಾಚಾರ ವೆಸಗಿದ್ದಾನೆ ಎಂದು ಗ್ವಾಲಿಯರ್‌ ಬಿಜೋಳಿ ಪೊಲೀಸ್‌ ಠಾಣೆಯ ಉಸ್ತಾವರಿ ರಘುವೀರ್‌ ಮೀನಾ ತಿಳಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಜನ್ವರ್‌ ಸಿಂಗ್‌ ಕುಶ್ವಾಹ(36), ರಾಜು ಕುಶ್ವಾಹ(25) ರಾಮ್ನಿವಾಸ್‌ ಕುಶ್ವಾಹ(24) ಮೂವರು ಆರೋಪಿಗಳನ್ನು ಸ್ಥಳೀಯ ಪೊಲೀಸರು ಬಂಧಿಸಿದ್ದಾರೆ.

ಸದ್ಯ ಮೂವರು ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್‌ 376 ಡಿ, 450, 506, 34 ಹಾಗೂ ಪೋಕ್ಸೋ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment