Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಬಳ್ಳಾರಿಗೆ ತೆರಳಲು ರೆಡ್ಡಿಗಿಲ್ಲ ಅನುಮತಿ; ಸುಪ್ರೀಂಕೋರ್ಟ್

ನವದೆಹಲಿ: ತವರು ಜಿಲ್ಲೆ ಬಳ್ಳಾರಿಗೆ ತೆರಳಲು ವಿಧಿಸಿದ್ದ ನಿರ್ಬಂಧದ ಷರತ್ತನ್ನು ಸಡಿಲಿಸುವಂತೆ ಕೋರಿ ಮಾಜಿ ಸಚಿವ, ಬಿಜೆಪಿ ಮುಖಂಡ ಗಾಲಿ ಜರ್ನಾರ್ದನ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.

ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಬಂಧನಕ್ಕೀಡಾಗಿದ್ದ ಜನಾರ್ದನ ರೆಡ್ಡಿಗೆ ತವರು ಜಿಲ್ಲೆ ಬಳ್ಳಾರಿಗೆ ತೆರಳದಂತೆ ಷರತ್ತು ವಿಧಿಸಿ ಸಿಬಿಐ ವಿಶೇಷ ಕೋರ್ಟ್ ಜಾಮೀನು ನೀಡಿತ್ತು.

ಈ ಹಿನ್ನೆಲೆಯಲ್ಲಿ ತನಗೆ ವಿಧಿಸಿದ್ದ ಷರತ್ತನ್ನು ಸಡಿಲಿಸುವಂತೆ ಕೋರಿ ಜನಾರ್ದನ ರೆಡ್ಡಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಸುಪ್ರೀಂಕೋರ್ಟ್ ರೆಡ್ಡಿ ಅರ್ಜಿಯನ್ನು ವಜಾಗೊಳಿಸಿದ ಹಿನ್ನೆಲೆಯಲ್ಲಿ ಷರತ್ತು ಮುಂದುವರಿಯಲಿದೆ.

No Comments

Leave A Comment