Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಸಂಸದ ಪ್ರತಾಪ್ ಸಿಂಹ, ಅಂಕಣಕಾರ ಚಕ್ರವರ್ತಿ ಸೂಲಿಬೆಲೆಗೆ ಜೀವ ಬೆದರಿಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ವ್ಯಕ್ತಿಯೊಬ್ಬ, ಮೈಸೂರು ಸಂಸದ ಪ್ರತಾಪ್ ಸಿಂಹ ಹಾಗೂ ಅಂಕಣಕಾರ ಚಕ್ರವರ್ತಿ ಸೂಲಿಬೆಲೆಯವರಿಗೆ ಜೀವ ಬೆದರಿಕೆ ಹಾಕಿದ್ದಾನೆ.

ನನ್ನ ಪ್ರಕಾರ ಗೌರಿ ಲಂಕೇಶ್ ಅಂತಹವರ ಸಾವಿಗೆ ಚಕ್ರವರ್ತಿ ಸೂಲಿಬೆಲೆ ಹಾಗೂ ಪ್ರತಾಪ್ ಸಿಂಹ ಅವರ ದ್ವೇಷದ ಮಾತುಗಳೇ ಕಾರಣ ಎಂದು ಟ್ವೀಟ್ ಮಾಡಿರುವ ಅನಂತಮೂರ್ತಿ ಬಿ ಹೆಸರಿನ ವ್ಯಕ್ತಿ  “ನಾ ಮುಂದೆ ಒಂದು ದಿನ.. ಆದರೆ ಮುಗಿಸಿ ಚಕ್ರವರ್ತಿ ಸೂಲಿಬೆಲೆ ಮತ್ತು ಪ್ರತಾಪ್‌ ಸಿಂಹ ಇವರನ್ನ…” ಎಂದು ಟ್ವೀಟ್ ಮಾಡಿದ್ದಾನೆ. 

ಟ್ವಿಟರ್ ನಲ್ಲಿ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಈ ಕುರಿತು ಪೊಲೀಸರಿಗೆ ದೂರು ನೀಡಿದ್ದು ರಕ್ಷಣೆ ನೀಡುವಂತೆ ಮನವಿ ಮಾಡಿದ್ದಾರೆ.

No Comments

Leave A Comment