Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಮಹೋತ್ಸವಕ್ಕೆ ಅದ್ದೂರಿಯ ಚಾಲನೆ....ನವೆ೦ಬರ್ 24ರಿ೦ದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 89ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ-ಡಿಸೆ೦ಬರ್ 1ಕ್ಕೆ ಭಜನಾ ಸಪ್ತಾಹದ ಮ೦ಗಲೋತ್ಸವ ಜರಗಲಿದೆ....

ಗುರುಗಾಂವ್ ಶಾಲಾ ಬಾಲಕನ ಹತ್ಯೆ: ಶಾಲೆಯ ಪಕ್ಕದಲ್ಲಿದ್ದ ಮಧ್ಯದಂಗಡಿಗೆ ಬೆಂಕಿಯಿಟ್ಟು ಉದ್ರಿಕ್ತರು

ನವದೆಹಲಿ: ಗುರುಗಾಂವ್ ನ ರಿಯಾನ್ ಇಂಟರ್’ನ್ಯಾಷನಲ್ ಶಾಲಾ ಬಾಲಕನ ಹತ್ಯೆಗೆ ಸಂಬಂಧಿಸಿದಂತೆ ಪ್ರತಿಭಟನೆಯ ಕಾವು ಜೋರಾಗಿದ್ದು ಪ್ರತಿಭಟನಾಕಾರರು ಶಾಲೆಯ ಪಕ್ಕದಲ್ಲಿದ್ದ ಮಧ್ಯದಂಗಡಿಗೆ ಬೆಂಕಿ ಹಚ್ಚಿದ್ದಾರೆ.

ದೇಶದಾದ್ಯಂತ ತೀವ್ರ ಸುದ್ದಿಗೆ ಗ್ರಾಸವಾಗಿದೆ. ಇನ್ನು ಶಾಲೆಯ ಮುಂಭಾಗದಲ್ಲಿ ಸೇರಿರುವ ನೂರಾರು ಮಂದಿ ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಪಕ್ಕದಲ್ಲೇ ಇದ್ದ ಬಾರಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದಾರೆ. ಸದ್ಯ ಸ್ಥಳದಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಗಿದ್ದು ಪ್ರತಿಭಟನಕಾರರನ್ನು ಚದುರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸುತ್ತಿದ್ದಾರೆ.

ಪೊಲೀಸರು ನಡೆಸುತ್ತಿರುವ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ. ಬಸ್ ಚಾಲಕನನ್ನು ತಪ್ಪಿತಸ್ಥ ಎಂದು ತೋರಿಸಲಾಗುತ್ತಿದ್ದು ಆದರೆ ಇದರ ಜವಾಬ್ದಾರಿಯನ್ನು ಶಾಲೆಯ ಆಡಳಿತ ಮಂಡಳಿ ಹೊರಬೇಕು ಎಂದು ಜತೆಗೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ಬಾಲಕನ ಪೋಷಕರು ಆಗ್ರಹಿಸಿದ್ದಾರೆ.

ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವಾಗಿ ನ್ಯಾಯ ದೊರಕಿಸುವುದಾಗಿ ಹರಿಯಾಣದ ಶಿಕ್ಷಣ ಸಚಿವ ರಾಮ್ ಬಿಲಾಸ್ ಶರ್ಮಾ ಭರವಸೆ ನೀಡಿದ್ದಾರೆ.

 ಕಳೆದ ಶುಕ್ರವಾರ ರಿಯಾನ್ ಇಂಟರ್ ನ್ಯಾಷನಲ್ ಶಾಲೆ ಶೌಚಾಲಯದಲ್ಲಿ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ಬಳಿಕ ಕುತ್ತಿಗೆಗೆ ಇರಿದು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಶಾಲಾ ವಾಹನದ ನಿರ್ವಾಹಕನೇ ಈ ಕುಕೃತ್ಯವನ್ನು ಎಸಗಿದ್ದಾನೆಂದು ಹೇಳಲಾಗುತ್ತಿದ್ದು ಪೊಲೀಸರು ಆತನನ ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

No Comments

Leave A Comment