Log In
BREAKING NEWS >
ಸೆ.26ರಿ೦ದ ಮಹಾಲಯ ಪಿತೃಪಕ್ಷಾರ೦ಭ....

ಯಾರೇ ನೀ ಬುಲ್, ಬುಲ್ ಅಂತ ಕಾಟ ಕೊಟ್ಟವನಿಗೆ ಹಿಗ್ಗಾಮುಗ್ಗಾ ಗೂಸಾ!

ಬೆಳಗಾವಿ: ಯಾರೇ ನೀ ಬುಲ್ ಬುಲ್ ಅಂತ ಮಹಿಳೆಗೆ ನಿರಂತರವಾಗಿ ಕಾಟ ಕೊಡುತ್ತಿದ್ದ ವ್ಯಕ್ತಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿ ಅರೆಬೆತ್ತಲೆ ಮೆರವಣಿಗೆ ಮಾಡಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಸವದತ್ತಿಯಲ್ಲಿ ಶುಕ್ರವಾರ ನಡೆದಿದೆ.

ಆರೋಪಿ ದಾವಲ್ ಪದೇ, ಪದೇ ಯಾರೇ ನೀ ಬುಲ್ ಬುಲ್ ಅಂತ ಮಹಿಳೆಯರಿಗೆ ಕಾಟ ಕೊಡುತ್ತಿದ್ದ. ಈ ಬಗ್ಗೆ ಸ್ಥಳೀಯರಯ ಹಲವಾರು ಬಾರಿ ಬುದ್ಧಿವಾದ ಹೇಳಿದ್ದರು. ಮಹಿಳೆಯರಿಗೆ ಅಸಭ್ಯವಾಗಿ ಮಾತನಾಡುವುದು, ಅಸಭ್ಯವಾಗಿ ವರ್ತಿಸುತ್ತಿದ್ದ ಎಂದು ಸ್ಥಳೀಯರು ದೂರಿದ್ದಾರೆ.

ಇಂದು ದಾವಲ್ ಕುಡಿದ ಮತ್ತಿನಲ್ಲಿ ಮಹಿಳೆಯೊಬ್ಬರಿಗೆ ಯಾರೇ ನೀ ಬುಲ್ ಬುಲ್ ಅಂತ ಕಾಟ ಕೊಡುತ್ತಿದ್ದಾಗಲೇ ಸ್ಥಳೀಯರು ಹಿಗ್ಗಾಮುಗ್ಗಾ ಗೂಸಾ ಕೊಟ್ಟು ಅರೆಬೆತ್ತಲೆ ಮಾಡಿ ಮೆರವಣಿಗೆ ಮಾಡಿಸಿದ್ದರು. ಬಳಿಕ ಆರೋಪಿ ದಾವಲ್ ನನ್ನು ಸವದತ್ತಿ ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ವರದಿ ತಿಳಿಸಿದೆ.

No Comments

Leave A Comment