Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಬನಾರಸ್ ಹಿಂದೂ ವಿವಿ ಹಿಂಸಾಚಾರ: ನೈತಿಕ ಹೊಣೆ ಹೊತ್ತು ಬಿಹೆಚ್’ಯು ಹಿರಿಯ ಅಧಿಕಾರಿ ರಾಜೀನಾಮೆ

ವಾರಣಾಸಿ: ವಿದ್ಯಾರ್ಥಿಗಳಿಗೆ ನೀಡಲಾಗಿದ್ದ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರದ ನೈತಿಕ ಹೊಣೆಯನ್ನು ಹೊತ್ತಿರುವ ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆಂದು ಮಂಗಳವಾರ ರಾತ್ರಿ ತಿಳಿದುಬಂದಿದೆ.

ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶಿಸ್ತುಪಾಲನೆಗೆ ಸಂಬಂಧಿಸಿದ ಅಧಿಕಾರಿ ಹಾಗೂ ಪ್ರೊಫೆಸರ್. ಒ.ಎನ್ ಸಿಂಗ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಿದ್ದು, ರಾಜೀನಾಮೆ ಪತ್ರವನ್ನು ಕಳೆದ ರಾತ್ರಿ ವಿಶ್ವವಿದ್ಯಾಲಯ ಉಪ ಪ್ರಾಂಶುಪಾಲ ಹಾಗೂ ಪ್ರಾಂಶುಪಾಲರಿಗೆ ನೀಡಿದ್ದಾರೆಂದು ವರದಿಗಳು ತಿಳಿಸಿವೆ.

ವಿಶ್ವವಿದ್ಯಾಲಯದ ತೃತೀಯ ವರ್ಷದ ಇಬ್ಬರು ವಿದ್ಯಾರ್ಥಿನಿಯರು ಕಳೆದ ವಾರ ತಮ್ಮ ಹಾಸ್ಟೆಲ್ ಗೆ ಹಿಂದಿರುತ್ತಿದ್ದ ವೇಳೆ ಭಾರತ್ ಕಲಾ ಭವನ್ ಬಳಿ ಬೈಕ್ ನಲ್ಲಿ ಬಂದಿರುವ ಬೀದಿ ಕಾಮಣ್ಣರು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಹೇಳಲಾಗುತ್ತಿತ್ತು.

ಈ ಬಗ್ಗೆ ವಿದ್ಯಾರ್ಥಿನಿಯರು ಹಾಸ್ಟೆಲ್ ನ ಭದ್ರತಾ ಸಿಬ್ಬಂದಿಯ ಮೇಲ್ವಿಚಾರಕರಿಗೆ ಮಾಹಿತಿ ನೀಡಿದ್ದರು. ಆದರೆ, ವಿದ್ಯಾರ್ಥಿನಿಯರ ನೆರವಿಗೆ ಬರಬೇಕಿದ್ದ ಮೇಲ್ವಿಚಾರಕರು, ಸಂಜೆ ಬಳಿಕ ಹಾಸ್ಟೆಲ್ ಬಿಟ್ಟು ಹೊರಗಡೆ ಹೋಗಿದ್ದು ಯಾಕೆ ಎಂದು ವಿದ್ಯಾರ್ಥಿನಿಯರನ್ನೇ ದಬಾಯಿಸಿದ್ದಾರೆ.

ಇದರಿಂದ ಆಕ್ರೋಶಗೊಂಡ ನೂರಾರು ವಿದ್ಯಾರ್ಥಿನಿಯರು ಶುಕ್ರವಾರ ಬೆಳಿಗ್ಗೆಯಿಂದಲೇ ಪ್ರತಿಭಟನೆ ನಡೆಸಲು ಆರಂಭಿಸಿದ್ದರು. ಆಡಳಿತ ಮಂಡಳಿತ ವರ್ತನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದರು.

ಇದರಂತೆ ವಿದ್ಯಾರ್ಥಿನಿಯರ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿತ್ತು. ಪೊಲೀಸರು ಪ್ರತಿಭಟನಾನಿರತ ವಿದ್ಯಾರ್ಥಿನಿಯರ ಮೇಲೆ ಲಾಠಿ ಚಾರ್ಜ್ ನಡೆಸಿದ್ದರು ಎಂಬ ಆರೋಪಗಳು ಕೇಳಿಬಂದಿದ್ದವು.

ಪ್ರಕರಣಕ್ಕೆ ಸಾಕಷ್ಟು ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗಿದ್ದವು. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಉತ್ತರಪ್ರದೇಶ ಡಿಜಿ, ಮುಖ್ಯ ಕಾರ್ಯದರ್ಶಿ ಹಾಗೂ ವಿಶ್ವವಿದ್ಯಾಲಯದ ಉಪ ಪ್ರಾಂಶುಪಾಲಕಿಗೆ ನೋಟಿಸ್ ಮಾಡಿತ್ತು. ನೋಟಿಸ್ ನಲ್ಲಿ ಪ್ರಕರಣ ಸಂಬಂಧ ನಾಲ್ಕು ವಾರಗಳೊಳಗಾಗಿ ವರದಿ ಸಲ್ಲಿಸುವಂತೆ ಸೂಚನೆ ನೀಡಿತ್ತು.

No Comments

Leave A Comment