Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ಉತ್ತರ ಪ್ರದೇಶ: ಮನೆಯಲ್ಲಿದ್ದ ಪಟಾಕಿ ಸ್ಫೋಟ, ತಾಯಿ-ಮಗಳ ಸಾವು

ಲಕ್ನೋ: ಉತ್ತರ ಪ್ರದೇಶದ ಅಲಿಘರ್ ನ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಪಟಾಕಿ ಸ್ಫೋಟಗೊಂಡ ಪರಿಣಾಮ ತಾಯಿ ಮಗಳು ಸಾವನ್ನಪ್ಪಿದ್ದು ಐವರು ಗಾಯಗೊಂಡಿದ್ದಾರೆ.

ಹರ್ದುಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ  ಜಲಾಲಿ ಎಂಬ ಪ್ರದೇಶದಲ್ಲಿರುವ ರಫೀಕ್ ಎಂಬ ಪಟಾಕಿ ಮಾರಾಟಗಾರನ ಮನೆಯಲ್ಲಿ ಸ್ಫೋಟ ಸಂಭವಿಸಿದೆ.

ಅಫ್ಸಾರಿ(35) ಮತ್ತು ತಾಯಬ್ಬ(15) ಮೃತ ದುರ್ದೈವಿಗಳು. ರಫೀಕ್ ಲೈಸೆನ್ಸ್ ಹೊಂದಿರುವ ಪಟಾಕಿ ಮಾರಾಟಗಾರನಾಗಿದ್ದಾನೆ. ಆದರೆ ಮನೆಯಲ್ಲಿ ಅಕ್ರಮವಾಗಿ ಪಟಾಕಿ ದಾಸ್ತಾನು ಮಾಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಅಲಿಘರ್ ನ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಕಾರ್ಯ ಕೈಗೊಂಡರು. ಎರಡು ಶವಗಳನ್ನು ಮನೆಯಿಂದ ಹೊರ ತೆಗೆಯಲಾಗಿದೆ. ಗಾಯಗೊಂಡ ಅವರನ್ನು ಅಲಿಘಡ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ದೀಪಾವಳಿ ಆರಂಭಕ್ಕೂ ಮುನ್ನ ನಡೆದ ಮೂರನೇ ದುರ್ಘಟನೆ ಇದಾಗಿದೆ.

No Comments

Leave A Comment