Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ವಿದ್ಯಾರ್ಥಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ

ಮೈಸೂರು: ಇಲ್ಲಿನ ಕುಕ್ಕರಹಳ್ಳಿ ಕೆರೆಯಲ್ಲಿ ವಿ.ದೀಕ್ಷಿತ್ (21) ಎಂಬ ವಿದ್ಯಾರ್ಥಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹುಣಸೂರು ಪಟ್ಟಣದ ನಿವಾಸಿಯಾಗಿರುವ ದೀಕ್ಷಿತ್‌, ಮೈಸೂರಿನ ಮಹಾರಾಜ ಕಾಲೇಜು ಪದವಿ ವಿದ್ಯಾರ್ಥಿ.

ನೀರಿನಲ್ಲಿ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ಸಾರ್ವಜನಿಕರು ಕೆರೆಯ ಪ್ರವೇಶ ದ್ವಾರದಲ್ಲಿರುವ ಭದ್ರತಾ ಸಿಬ್ಬಂದಿಯ ಗಮನಕ್ಕೆ ತಂದಿದ್ದರು. ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ಶವವನ್ನು ಹೊರತೆಗೆದರು.

ಎರಡು ದಿನಗಳ ಹಿಂದೆ ವಿದ್ಯಾರ್ಥಿ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಜಯಲಕ್ಷ್ಮಿಪುರಂ ಠಾಣೆಯ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

No Comments

Leave A Comment