Log In
BREAKING NEWS >
ವಿಶ್ವಾಸಮತದ ಅಗ್ನಿಪರೀಕ್ಷೆ ಗೆದ್ದ ಗೋವಾ ಸಿಎಂ ಪ್ರಮೋದ್ ಸಾವಂತ್...ಡಯಾನ ಸಮೂಹ ಸ೦ಸ್ಥೆಯ ಪಾಲುದಾರರಾದ ಎ೦.ಯಶವ೦ತ ಪೈ ನಿಧನ...

ಸರಗಳ್ಳತನ ಮಾಡುತ್ತಿದ್ದ ನಿರ್ಮಾಪಕನ ಬಂಧನ

ಬೆಂಗಳೂರು: ಸರಗಳ್ಳತನ ಮಾಡುತ್ತಿದ್ದ ಸ್ಯಾಂಡಲ್‌ವುಡ್‌ ನಿರ್ಮಾಪಕನೊಬ್ಬನನ್ನು ಬೆಂಗಳೂರು ಪೊಲೀಸರು ಬಂಧಿಸಿದ ಘಟನೆ ನಗರದಲ್ಲಿ ಶನಿವಾರ ನಡೆದಿದೆ.

 

ಬಂಧಿತ ನಿರ್ಮಾಪಕನನ್ನು ಪ್ರತಾಪ್‌ ರಂಗು ಅಲಿಯಾಸ್‌ ರಂಗ ಎಂದು ಗುರುತಿಸಲಾಗಿದೆ. ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿದ್ದು, 15 ದಿನಗಳ ಹಿಂದೆ ಪೊಲೀಸರಿಗೆ ಚಳ್ಳೇಹಣ್ಣು ತಿನ್ನಿಸಿದ್ದ. ಪೊಲೀಸ್ ಠಾಣೆಯಿಂದಲೇ ಪರಾರಿಯಾಗಿ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿ ನಿರ್ಮಾಪಕನನ್ನು ಬಸವೇಶ್ವರ ನಗರ ಪೊಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿ `ಡಬಲ್ ಮೀನಿಂಗ್’ ಸಿನಿಮಾದ ನಿರ್ಮಾಪಕನಾಗಿದ್ದು, ಬಸವೇಶ್ವರನಗರ, ಮಹಾಲಕ್ಷ್ಮಿಲೇಔಟ್ ಸುತ್ತಮುತ್ತ ಸರಗಳ್ಳತನ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.

No Comments

Leave A Comment