Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಫ್ರಿಡ್ಜ್ ಸ್ಫೋಟಗೊಂಡು ಇಬ್ಬರು ಬಾಲಕರು ಬಲಿ; ದೇಹ ಛಿದ್ರ, ಛಿದ್ರ

ವಿಜಯಪುರ: ಫ್ರಿಡ್ಜ್ ಸ್ಫೋಟಗೊಂಡ ಪರಿಣಾಮ ಇಬ್ಬರು ಬಾಲಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಉತ್ನಾಳ ಗ್ರಾಮದಲ್ಲಿ ಶನಿವಾರ ಸಂಭವಿಸಿದೆ.

ಉತ್ನಾಳ ಗ್ರಾಮದ ತೋಟದ ಮನೆಯಲ್ಲಿ ಫ್ರಿಡ್ಜ್ ನಲ್ಲಿನ ಗ್ಯಾಸ್ ಸೋರಿಕೆಯಿಂದಾಗಿ ಸ್ಫೋಟಗೊಂಡಿತ್ತು. ಸಮೀಪದಲ್ಲೇ ಇದ್ದ ಸಂಜೀವ್ ಕುಮಾರ್ (11ವರ್ಷ), ಪವನ ಪ್ರಕಾಶ್ ಹೂಗಾರ್(5) ಸ್ಥಳದಲ್ಲೇ ಸಾವನ್ನಪ್ಪಿದ್ದರು. ಬಾಲಕರ ಮೃತದೇಹಗಳು ಛಿದ್ರ, ಛಿದ್ರಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಸ್ಥಳಕ್ಕೆ ವಿಜಯಪುರ ಗ್ರಾಮಾಂತರ ಠಾಣೆಯ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿರುವುದಾಗಿ ವರದಿ ಹೇಳಿದೆ.

No Comments

Leave A Comment