Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಗಮನ ಸೆಳೆದ ಸಿಎಂ ಕರಾಟೆ ಪಂಚ್‌ ರಾಷ್ಟ್ರ ಮಟ್ಟದ ಕರಾಟೆ ಟೂರ್ನಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮಂಗಳೂರು: ಮಹಿಳೆಯರು ಕರಾಟೆ ಕಲಿಯುವುದು ಅವಶ್ಯವಾಗಿದೆ. ದೌರ್ಜನ್ಯ ತಡೆಗೆ ಇದೊಂದು ಅಸ್ತ್ರ. ಎಲ್ಲ ಶಾಲೆಗಳಲ್ಲಿಯೂ ವಿದ್ಯಾರ್ಥಿಗಳು ಕರಾಟೆ ಕಲಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು.

ಶನಿವಾರ ರಾಷ್ಟ್ರ ಮಟ್ಟದ ಕರಾಟೆ ಟೂರ್ನಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಪುಟಾಣಿಗಳ ನಡುವಿನ ಸ್ಪರ್ಧೆಗೆ ಚಾಲನೆ ನೀಡುವ ಮೂಲಕ ಕಾರ್ಯಕ್ರಮ ಉದ್ಘಾಟನೆಗೊಂಡಿತು. ಇದೇ ವೇಳೆ ಸಿಎಂ ಕೂಡ ಕರಾಟೆ ವರಸೆ ಪ್ರದರ್ಶಿಸಿ ಗಮನ ಸೆಳೆದರು.

ಅಕ್ರಮ ಗಣಿಗಾರಿಕೆ ತನಿಖೆಗೆ ಎಸ್‌ಐಟಿ:
ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡುವ  ಕುರಿತು ಸರ್ಕಾರ ಚಿಂತನೆ ನಡೆಸಲಿದೆ ಎಂದು ಸಿಎಂ ಮಂಗಳೂರು ಬಜ್ಪೆ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

ಪರಿವರ್ತನೆ ಬಿಜೆಪಿಯವರಲ್ಲಿ ಆಗಬೇಕು. ಕಾಂಗ್ರೆಸ್ ಕೂಡಾ ಯಾತ್ರೆ ಮಾಡಲಿದೆ ಎಂದರು.

No Comments

Leave A Comment