Log In
BREAKING NEWS >
ನಾಡಿನ ಸಮಸ್ತ ಜನತೆಗೆ, ನಮೆಲ್ಲಾ ಓದುಗರಿಗೆ,ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನಾಗರ ಪ೦ಚಮಿ ಹಾಗೂ ನೇ ಸ್ವಾತ೦ತ್ರೋತ್ಸವದ ಶುಭಾಶಯಗಳು....

ತಮಿಳುನಾಡಿನಲ್ಲಿ ಮುಂದುವರೆದ ವರುಣನ ಆರ್ಭಟ: 12 ಸಾವು, ಸಂಕಷ್ಟದಲ್ಲಿ ಸಾವಿರಾರು ಜನ

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ರಾಜ್ಯದ್ಯಂತ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಸಂಭವಿಸಿದ ಘಟನೆಗಳಲ್ಲಿ 12 ಮಂದಿ ಸಾವನ್ನಪ್ಪಿದ್ದು, ಸಾವಿರಾರು ಜನರು ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.

ಭೀಕರ ಮಳೆಯಿಂದಾಗಿ ಚೆನ್ನೈ ನಗರ ಜನತೆ ಈಗಾಗಲೇ ನಲುಗಿ ಹೋಗಿದ್ದು, ಸಾವಿರಾರು ಜನತೆ ಸಂಕಷ್ಟಕ್ಕೆ ಸಿಲುಕಿ ಹಾಕಿಕೊಂಡಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಸಂಕಷ್ಟದಲ್ಲಿರುವ ನಾಗರೀಕರ ರಕ್ಷಿಸಲು ಮುಂದಾಗಿರುವ ತಮಿಳುನಾಡು ರಾಜ್ಯ ಸರ್ಕಾರ ಈಗಾಗಲೇ 7000 ನಿರಾಶ್ರಿತ ಶಿಬಿರಗಳನ್ನು ಸ್ಥಾಪನೆ ಮಾಡಿದೆ.

ಈಶಾನ್ಯ ಮಾನ್ಸೂನ್ ನಿಂದಾಗಿ ರಾಜ್ಯದಲ್ಲಿ 7 ಮಂದಿ ಸಾವನ್ನಪ್ಪಿದೆ ಎಂದು ತಮಿಳುನಾಡು ರಾಜ್ಯ ಸರ್ಕಾರದ ಉನ್ನತಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಂದಾಯ ಇಲಾಖೆ ಆಡಳಿತದ ಆಯುಕ್ತ ಕೆ. ಸತ್ಯಗೋಪಾಲ್ ಮಾತನಾಡಿ, ಸಿಡಿಲು ಹಾಗೂ ಗೋಡೆ ಕುಸಿತದಿಂದಾಗಿ 7 ಮದಿ ಸಾವನ್ನಪ್ಪಿದ್ದಾರೆ. ಮಳೆ ಅವಾಂತರಗಳಿಂದಾಗಿ ಸಂಕಷ್ಟದಲ್ಲಿ ಸಿಲುಗಿರುವ 7,100 ಜನರನ್ನು ರಕ್ಷಣೆ ಮಾಡಲಾಗಿದ್ದು, ಚೆನ್ನೈ, ಕಾಂಚಿಪುರಂ, ತಿರುವಲ್ಲೂರ್ ಮತ್ತು ನಾಗಪಟಿನಮ್ ಜಿಲ್ಲೆಗಳಲ್ಲಿ ಸ್ಥಾಪಿಸಲಾಗಿರುವ ನಿರಾಶ್ರಿತ ಶಿಬಿರದಲ್ಲಿ ಇರಿಸಲಾಗಿದೆ. 87,000 ಆಹಾರ ಪೊಟ್ಟಣಗಳನ್ನು ವಿತರಿಸಲಾಗಿದೆ ಎಂದು ಹೇಳಿದ್ದಾರೆ.

ತಮಿಳುನಾಡು ರಾಜ್ಯದಲ್ಲಿ ಈವರೆಗೂ ಒಟ್ಟು 195.9 ಎಂಎಂ ರಷ್ಟು ಮಳೆಯಾಗಿದೆ. ರಾಜ್ಯದಲ್ಲಿಯೇ ಅಧಿಕ ಮಳೆ ಚೆನ್ನೈ ನಗರದಲ್ಲಾಗಿದ್ದು, 7 ಸೆಂ.ಮೀ ಸುರಿದಿದೆ. ಕೆಲ ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಚೆನ್ನೈ, ಕಾಂಚೀಪುರಂ, ತಿರುವಳ್ಳೂರು, ನಾಗಪಟ್ಟಿಣಂ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಪುದುಚೇರಿ ಕೂಡ ಮಳೆಯಿಂದ ತತ್ತರಿಸಿದೆ.

ಕಾಂಚೀಪುರಂ ಜಿಲ್ಲೆಯಲ್ಲಿ ಮಳೆಗೆ ಸಂಬಂಧಿಸಿದ ಕೆಲಸಗಳನ್ನು ನೋಡಿಕೊಳ್ಳುವ ಸಲುವಾಗಿ ರಾಜ್ಯ ಸರ್ಕಾರ ಇದೀಗ ಹೆಚ್ಚುವರಿಯಾಗಿ 7 ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿಕೊಂಡಿದೆ. ಮಧುರಾಂತಕಂ ಜಲಾಶಯದಿಂದ ಕಿಳಿಯಾರ್ ನದಿಗೆ ನೀರುನ್ನು ಬಿಡುಗಡೆ ಮಾಡಿರುವ ಹಿನ್ನಲೆಯಲ್ಲಿ ನದಿ ಈಗಾಗಲೇ ಭರ್ತಿಯಾಗಿದ್ದು, ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿರುವ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿಗಳು ಎಚ್ಚರಿಕೆಗಳನ್ನು ನೀಡಿದ್ದಾರೆ.

No Comments

Leave A Comment