Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ದೆಹಲಿಯಲ್ಲಿ ಸಮ-ಬೆಸ ಯಶಸ್ವಿಯಾದರೆ ಬೆಂಗಳೂರಿನಲ್ಲೂ ಜಾರಿ: ರಾಮಲಿಂಗಾ ರೆಡ್ಡಿ

ಬೆಂಗಳೂರು: ದೆಹಲಿಯಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಅರವಿಂದ್ ಕೇಜ್ರಿವಾಲ್ ನೇತೃತ್ವದ ದೆಹಲಿ ಸರ್ಕಾರ ರಾಷ್ಟ್ರ ರಾಜಧಾನಿಯಲ್ಲಿ ಈಗ ಮೂರನೇ ಬಾರಿಗೆ ಸಮ-ಬೆಸ ಸಂಖ್ಯೆಯ ನಿಯಮ ಜಾರಿಗೆ ತರುತ್ತಿದ್ದು, ಈ ಬಾರಿ ಅಲ್ಲಿ ಯಶಸ್ವಿಯಾದರೆ ಅದನ್ನು ಬೆಂಗಳೂರಿನಲ್ಲೂ ಜಾರಿಗೊಳಿಸುವುದಾಗಿ ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಶನಿವಾರ ಹೇಳಿದ್ದಾರೆ.

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಾಮಲಿಂಗಾರೆಡ್ಡಿ ಅವರು, ಸಮ-ಬೆಸ ನಿಯಮ ದೆಹಲಿಯ ಮಾಲಿನ್ಯ ನಿಯಂತ್ರಿಸುತ್ತದೆ ಎಂಬುದು ಸಾಬೀತಾದರೆ, ಅದನ್ನು ಬೆಂಗಳೂರಿನಲ್ಲೂ ಜಾರಿಗೊಳಿಸುವಂತೆ ಸಾರಿಗೆ ಇಲಾಖೆಗೆ ಸೂಚಿಸಲಾಗುವುದು ಮತ್ತು ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುವುದಾಗಿ ತಿಳಿಸಿದ್ದಾರೆ.

ಬೆಂಗಳೂರಿನಂತಹ ನಗರಗಳಲ್ಲಿ ಕೇವಲ ಸಮ-ಬೆಸ ನಿಯಮದಿಂದ ಮಾತ್ರ ಮಾಲಿನ್ಯವನ್ನು ಸಂಪೂರ್ಣವಾಗಿ ನಿಯಂತ್ರಿಸಲು ಸಾಧ್ಯವಿಲ್ಲ. ವಾಹನಗಳ ಪ್ರಮಾಣ ಕಡಿಮೆಯಾಗಬೇಕು. 2013ರಲ್ಲಿ ನಗರದಲ್ಲಿ 54 ಲಕ್ಷ ವಾಹನಗಳಿದ್ದವು. ಕಳೆದ ನಾಲ್ಕು ವರ್ಷಗಳಲ್ಲಿ ಸುಮಾರು 12 ಲಕ್ಷ ವಾಹನಗಳು ಹೆಚ್ಚಾಗಿವೆ ಎಂದು ಈ ಹಿಂದೆ ಸಾರಿಗೆ ಸಚಿವರಾಗಿದ್ದ ರಾಮಲಿಂಗಾ ರೆಡ್ಡಿ ಅವರು ಹೇಳಿದ್ದಾರೆ.

ದೆಹಲಿಯಲ್ಲಿ ವಾಯು ಮಾಲಿನ್ಯ ಪ್ರಮಾಣ ಅಪಾಯದ ಮಟ್ಟಕ್ಕೆ ಏರಿದ್ದು, ಅದನ್ನು ತಡೆಯುವುದಕ್ಕಾಗಿ ದೆಹಲಿ ಸರ್ಕಾರ ನವೆಂಬರ್ 13ರಿಂದ 5 ದಿನಗಗಳ ಕಾಲ ಸಮ-ಬೆಸ ನಿಯಮ ಜಾರಿಗೆ ತರುತ್ತಿದೆ.

No Comments

Leave A Comment