Log In
BREAKING NEWS >
ಪಕ್ಷೇತರ ಅಭ್ಯರ್ಥಿಯಾಗಿ ಉಡುಪಿ ಶಿರೂರು ಶ್ರೀನಾಮಪತ್ರ ಸಲ್ಲಿಕೆ.....ಏಪ್ರಿಲ್ 22ರ೦ದು ಉಡುಪಿಯ ಕಲ್ಸ೦ಕದ ರಾಯಲ್ ಗಾರ್ಡನ್ ನಲ್ಲಿ ಬೃಹತ್ ಕಾ೦ಗ್ರೆಸ್ ಕಾರ್ಯಕರ್ತರ ಸಮಾವೇಶ-23ರ೦ದು ಪ್ರಮೋದ್ ಮಧ್ವರಾಜ್ ನಾಮಪತ್ರಸಲ್ಲಿಕೆ...

ಹಂದ್ವಾರ ಎನ್ ಕೌಂಟರ್: 3 ಎಲ್ ಇಟಿ ಉಗ್ರರ ಹತ್ಯೆ, ವಾಯುಸೇನೆ ಅಧಿಕಾರಿ ಹುತಾತ್ಮ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಉಪಟಳ ಮುಂದುವರೆದಿದ್ದು, ಮಂಗಳವಾರ ಕಾಶ್ಮೀರದ ಹಂದ್ವಾರದಲ್ಲಿ ಮೂವರು ಲಷ್ಕರ್ ಉಗ್ರರನ್ನು ಸೇನೆ ಹೊಡೆದುರುಳಿಸಿದೆ.
ಸೇನಾ ಮೂಲಗಳ ಪ್ರಕಾರ ಮೃತ ಉಗ್ರರೆಲ್ಲರೂ ಪಾಕಿಸ್ತಾನ ಮೂಲದವರಾಗಿದ್ದು, ಸೇನಾ ಕಾರ್ಯಾಚರಣೆ ವೇಳೆ ಐಎಎಫ್ ನ ಓರ್ವ ಯೋಧ ಕೂಡ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ. ಹುತಾತ್ಮ ಯೋಧರನ್ನು  ಐಎಎಫ್ ನ ಗರುಡಾ ಸಿಬ್ಬಂದಿ ಎಂದು ಹೇಳಲಾಗಿದೆ.
ಸೈನಿಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
ಸೇನಾ ಮೂಲಗಳು ತಿಳಿಸಿರುವಂತೆ ಕುಖ್ಯಾತ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆ ಕಣಿವೆ ರಾಜ್ಯದಲ್ಲಿ ಭಾರಿ ವಿಧ್ವಂಸಕ ಕೃತ್ಯಕ್ಕೆ ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದೆ. ಇದೇ ಕಾರಣಕ್ಕೆ ಶಸ್ತ್ರ ಸಜ್ಜಿತ ಉಗ್ರರನ್ನು ಸಿದ್ಧ  ಪಡಿಸಿ ದಾಳಿಗೆ ಮುಂದಾಗಿತ್ತು. ಆದರೆ ಭಾರತೀಯ ಸೈನಿಕರ ಸಮಯ ಪ್ರಜ್ಞೆಯಿಂದಾಗಿ ಆಗಬಹುದಾಗಿದ್ದ ಭಾರಿ ಅನಾಹುತವನ್ನು ತಡೆದಂತಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ಕಾಶ್ಮೀರದ ಡಿಜಿಪಿ ಎಸ್ ಪಿ ವಾಲಿದ್ ಅವರು  ಮಾಹಿತಿ ನೀಡಿದ್ದು, ಹಂದ್ವಾರದ ಮಾಗನ್ ಪ್ರದೇಶದಲ್ಲಿ ಅವಿತಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
No Comments

Leave A Comment