Log In
BREAKING NEWS >
ಉಡುಪಿಯ ಶ್ರೀಶಿರೂರು ಶ್ರೀಗಳು ಹರಿಪಾದಕ್ಕೆ-ಇನ್ನಿಲ್ಲವಾದರು ಶ್ರೀಗಳು-ಉಡುಪಿಯ ಶ್ರೀಕೃಷ್ಣಮಠ ಹಾಗೂ ಶಿರೂರು ಮಠಕ್ಕೆ ಬಿಗುಭದ್ರತೆ

ತಿಂಗಳೊಳಗೆ ಕಳಸಾ,ಬಂಡೂರಿ ಸಮಸ್ಯೆ ಇತ್ಯರ್ಥ; ಬಿಎಸ್ ವೈ ಭರವಸೆ!

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರವು ಇಲ್ಲದೆ ಕಳಸಾ, ಬಂಡೂರಿ ಸಮಸ್ಯೆಯನ್ನು ಒಂದು ತಿಂಗಳೊಳಗಾಗಿ ನಿವಾರಣೆ ಮಾಡುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದ್ದಾರೆ.

ಚಿಕ್ಕೋಡಿಯಲ್ಲಿನ ಸಂಕೇಶ್ವರ ಪಟ್ಟಣದಲ್ಲಿ ಬಿಜೆಪಿ ಪರಿವರ್ತನಾ ಯಾತ್ರೆಯ ರಾಲಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ಅನುಮೋದಿಸಿದ್ರೆ ಕಳಸಾ, ಬಂಡೂರಿ ಸಮಸ್ಯೆ ಬಗ್ಗೆ ಕೇಂದ್ರದ ಜತೆ ಮಾತನಾಡುವುದಾಗಿ ಹೇಳಿದರು.

ನೆರೆಯ ಗೋವಾದಲ್ಲಿ ನಮ್ಮದೇ(ಬಿಜೆಪಿ) ಮುಖ್ಯಮಂತ್ರಿ ಇದ್ದಾರೆ, ಮಹಾರಾಷ್ಟ್ರದಲ್ಲಿಯೂ ನಮ್ಮದೇ ಮುಖ್ಯಮಂತ್ರಿ ಇದ್ದಾರೆ. ಹೀಗಾಗಿ ಒಂದು ತಿಂಗಳೊಳಗಾಗಿ ಕಳಸಾ, ಬಂಡೂರಿ ಸಮಸ್ಯೆ ಬಗೆಹರಿಸುವುದಾಗಿ ಆಶ್ವಾಸನೆ ನೀಡಿದರು.

ಅಷ್ಟೇ ಅಲ್ಲ ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮ ಹೆಸರು ಇಡುವುದಾಗಿಯೂ ಹೇಳಿದರು. ಈ ಬಾರಿ ಬಿಜೆಪಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡಿಕೊಂಡರು.

No Comments

Leave A Comment