Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ರಾಹುಲ್ ಗಾಂಧಿ ಕಾಂಗ್ರೆಸ್ ನ ಡಾರ್ಲಿಂಗ್, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ: ಮನಮೋಹನ್ ಸಿಂಗ್

ನವದೆಹಲಿ: ರಾಹುಲ್ ಗಾಂಧಿ ಕಾಂಗ್ರೆಸ್ ನ ಡಾರ್ಲಿಂಗ್, ಪಕ್ಷವನ್ನು ಸಮರ್ಥವಾಗಿ ಮುನ್ನಡೆಸುತ್ತಾರೆ ಎಂದು ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಸಲ್ಲಿಸಿದ ನಾಮಪತ್ರಕ್ಕೆ ಅನುಮೋದಕರಾಗಿ ಸಹಿ ಹಾಕಿದ ನಂತರ ಮಾತನಾಡಿರುವ ಡಾ.ಮನಮೋಹನ್ ಸಿಂಗ್, ರಾಹುಲ್ ಗಾಂಧಿ ಕಾಂಗ್ರೆಸ್ ಪಕ್ಷದ ನೆಚ್ಚಿನ ನಾಯಕ, ಪಕ್ಷದ ಶ್ರೇಷ್ಠತೆಯನ್ನು ರಾಹುಲ್ ಗಾಂಧಿ ಮುಂದುವರೆಸಿಕೊಂಡು ಹೋಗಲಿದ್ದಾರೆ ಎಂದು ಹೇಳಿದ್ದಾರೆ.

ಇದೇ ವೇಳೆ ಪ್ರತಿಕ್ರಿಯೆ ನೀಡಿರುವ ಪಂಜಾಬ್ ನ ಸಿಎಂ ಅಮರಿಂದರ್ ಸಿಂಗ್ ರಾಹುಲ್ ಗಾಂಧಿ ಅತ್ಯುತ್ತಮ ಪ್ರಧಾನಿಯಾಗಲಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರನ್ನು ಅನುಮೋದಿಸಿ ಕಾಂಗ್ರೆಸ್ ನ ಹಿರಿಯ ನಾಯಕರಾದ ಶೀಲಾ ದೀಕ್ಷಿತ್, ಕಮಲ್ ನಾಥ್, ಮೋತಿಲಾಲ್ ವೋರಾ, ತರುಣ್ ಗೊಗೋಯ್ ಸಹಿ ಹಾಕಿದ್ದು, ರಾಹುಲ್ ಗಾಂಧಿ ಕಾಂಗ್ರೆಸ್ ನ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ.

No Comments

Leave A Comment