Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಗೆ ಸೋನಿಯಾ ಸಲಹೆ, ಪ್ರಿಯಾಂಕ ಕಾರ್ಯತಂತ್ರದ ಬಲ!

ನವದೆಹಲಿ: 17 ವರ್ಷಗಳ ನಂತರ ಸೋನಿಯಾ ಗಾಂಧಿ ಎಐಸಿಸಿ ಅಧ್ಯಕ್ಷ ಸ್ಥಾನನಿಂದ ನಿವೃತ್ತರಾಗುತ್ತಿದ್ದು, ರಾಹುಲ್ ಗಾಂಧಿ ಎಐಸಿಸಿ ಅಧ್ಯಕ್ಷರಾಗುವುದು ಬಹುತೇಕ ಖಚಿತವಾಗಿದೆ. ಪುತ್ರನಿಗೆ ಅಧ್ಯಕ್ಷ ಸ್ಥಾನ ಬಿಟ್ಟುಕೊಡುತ್ತಿರುವ ಸೋನಿಯಾ ಗಾಂಧಿ, ಇನ್ನು ಮುಂದೆ ರಾಹುಲ್ ಗಾಂಧಿಗೆ ಸಹಲೆಗಾರರ ಪಾತ್ರವನ್ನು ನಿರ್ವಹಿಸಲಿದ್ದಾರೆ.

2000 ರಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಸೋನಿಯಾ ಗಾಂಧಿ ಶೀಘ್ರವಾಗಿ ದೇಶದ ರಾಜಕಾರಣದ ಪಟ್ಟುಗಳನ್ನು ಕರಗತ ಮಾಡಿಕೊಂಡು ಎನ್ ಸಿಪಿ, ಆರ್ ಜೆಡಿ, ಟಿಎಂಸಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದರಲ್ಲಿ ಯಶಸ್ವಿಯಾಗಿದ್ದರು.

ರಾಹುಲ್ ಗಾಂಧಿ ಅವರು ಎಐಸಿಸಿ ಅಧ್ಯಕ್ಷರಾಗುವುದನ್ನು ನಾವು ಸ್ವಾಗತಿಸುತ್ತೇವೆ, ಇದೇ ವೇಳೆ ಇಷ್ಟು ವರ್ಷ ಕಾಂಗ್ರೆಸ್ ಗೆ ಸಮರ್ಥ ನಾಯಕತ್ವ ನೀಡಿದ ಸೋನಿಯಾ ಗಾಂಧಿ ಅವರಿಗೆ ಧನ್ಯವಾದ ತಿಳಿಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಗುರುದಾಸ್ ಕಾಮತ್ ಹೇಳಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ಸೋನಿಯಾ ಗಾಂಧಿ ಸಲಹೆ ಇರುತ್ತದೆ ಹಾಗೂ ಹಿನ್ನೆಲೆಯಲ್ಲಿ ಪ್ರಿಯಾಂಕ ವಾಧ್ರ ಕಾರ್ಯತಂತ್ರ ರೂಪಿಸಲಿದ್ದು, ರಾಹುಲ್ ಗಾಂಧಿ ಅವರ ರಾಜಕೀಯ ಯಶಸ್ಸಿಗೆ ಮತ್ತಷ್ಟು ಬಲ ನೀಡಲಿದ್ದಾರೆ ಎಂದು ವಿಶ್ಲೇಷಿಸಲಾಗುತ್ತಿದೆ.

No Comments

Leave A Comment