Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ತಿರುಚಿನಾಪಳ್ಳಿ ಸಮೀಪ ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

ತಿರುಚಿನಾಪಳ್ಳಿ, ತಮಿಳುನಾಡು : ಇಲ್ಲಿಂದ ಸುಮಾರು 50 ಕಿ.ಮೀ. ದೂರದಲ್ಲಿರುವ ತಿರುವಂಕುರಿಚ್ಚಿ ಎಂಬಲ್ಲಿ ವ್ಯಾನೊಂದು ರಸ್ತೆ ಬದಿ ನಿಂತಿದ್ದ ಟ್ರಕ್ಕಿಗೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಒಟ್ಟು 9 ಮಂದಿ ಅಸುನೀಗಿದ್ದಾರೆ.

ವ್ಯಾನಿನಲ್ಲಿದ್ದವು ಕನ್ಯಾಕುಮಾರಿಯಿಂದ ತಿರುಚಿನಾಪಳ್ಳಿ ಮಾರ್ಗವಾಗಿ ತಿರುಪತಿಗೆ ಹೋಗುತ್ತಿದ್ದರು. ಈ ಭೀಕರ ಅಪಘಾತ ನಿನ್ನೆ ಬುಧವಾರ ರಾತ್ರಿ ಸಂಭವಿಸಿತೆಂದು ಪೊಲೀಸರು ತಿಳಿಸಿದ್ದಾರೆ.

ಈ ಅವಘಡದಲ್ಲಿ ಗಾಯಾಳುಗಳಾದ ನಾಲ್ಕು ಮಂದಿಯನ್ನು ಇಲ್ಲಿನ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಪೊಲೀಸರು ಕೇಸು ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೃತರ ಗುರುತು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Read more at https://www.udayavani.com/kannada/news/national-news/257024/nine-killed-in-road-accident-near-tiruchirappali#jtRqD37wVeAXov1t.99

No Comments

Leave A Comment