Log In
BREAKING NEWS >
````````ಸಮಸ್ತ ಓದುಗರಿಗೆ,ಜಾಹೀರಾತುದಾರರಿಗೆ ಮತ್ತು ಅಭಿಮಾನಿಗಳಿಗೆ " ಮಕರ ಸ೦ಕ್ರಮಣ" ಶುಭಾಶಯಗಳು ```````

ಬೆಂಗಳೂರಿನಲ್ಲಿ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡನ ಬರ್ಬರ ಹತ್ಯೆ

ಬೆಂಗಳೂರು: ಬಿಬಿಎಂಪಿ ಮಾಜಿ ಕಾರ್ಪೋರೇಟರ್ ಹಾಗೂ ಜೆಡಿಎಸ್ ಮುಖಂಡ ಗೋವಿಂದೇ’ಗೌಡ(58) ಅವರನ್ನು ಶನಿವಾರ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.

 ಸಂಜೆ 4.30ರ ಸುಮಾರಿಗೆ ರಾಜಗೋಲಾಪನಗರದ ಹೆಗ್ಗನಹಳ್ಳಿ ಮುಖ್ಯರಸ್ತೆಯ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡ ಅವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ಅವರನ್ನು ಸುಂಕದಕಟ್ಟೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

2016ರ ನವೆಂಬರ್ 8ರಂದು ಬಿಜೆಪಿ ಮುಖಂಡ ಚಿಕ್ಕತಿಮ್ಮೇಗೌಡ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಗೋವಿಂದೇಗೌಡ ಇತ್ತೀಚಗಷ್ಟೆ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ.

No Comments

Leave A Comment