Log In
BREAKING NEWS >
ನಡೆದಾಡುವ ದೇವರು “ಸಿದ್ದಗಂಗಾಶ್ರೀ” ಶಿವೈಕ್ಯ......ಜನವರಿ 25ಕ್ಕೆ ಬೆಳಿಗ್ಗೆ 9.30ಕ್ಕೆ ಉಡುಪಿಯ ಟಿ ಎ೦ ಎ ಪೈ ಹಿ೦ಬದಿಯಲ್ಲಿನ ಸ್ಥಳದಲ್ಲಿ ನೂತನ "ನಯಾಬ್ "ವಸತಿ ಸಮುಚ್ಚಾಯದ ಶಿಲಾನ್ಯಾಸ ಜರಗಲಿದೆ

1ನೇ ಏಕದಿನ ಪಂದ್ಯ: ಭಾರತಕ್ಕೆ ಆರಂಭಿಕ ಆಘಾತ, ಧವನ್ 0, ರೋಹಿತ್ 2 ರನ್‌ಗೆ ಔಟ್

ಧರ್ಮಶಾಲಾ: ಟೀಂ ಇಂಡಿಯಾ ಹಾಗೂ ಶ್ರೀಲಂಕಾ ನಡುವಿನ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾಗೆ ಆರಂಭಿಕ ಆಘಾತ ಎದುರಾಗಿದೆ.

ಧರ್ಮಶಾಲಾದಲ್ಲಿ ನಡೆಯುತ್ತಿರುವ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ 3 ರನ್ ಗೆ ಪ್ರಮುಖ ಎರಡು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಆರಂಭಿಕರಾಗಿ ಕಣಕ್ಕೀಳಿದ ಸ್ಫೋಟಕ ಬ್ಯಾಟ್ಸ್ ಮನ್ ಶಿಖರ್ ಧವನ್ ಶೂನ್ಯಕ್ಕೆ ಔಟಾದರೇ ನಾಯಕ ರೋಹಿತ್ ಶರ್ಮಾ 2 ರನ್ ಗಳಿಗೆ ಔಟ್ ಆಗಿ ಪೆವಿಲಿಯನ್ ಸೇರಿದರು. ನಂತರ ಬಂದ ದಿನೇಶ್ ಕಾರ್ತಿಕ್ ಸಹ ಶೂನ್ಯಕ್ಕೆ ಔಟಾದರು.

ಸದ್ಯ ಭಾರತ 9 ಓವರ್ ಮುಕ್ತಾಯಕ್ಕೆ 3 ವಿಕೆಟ್ ಕಳೆದುಕೊಂಡು 8 ರನ್ ಗಳಿಸಿ ಆಡುತ್ತಿದೆ. ಭಾರತ ಪರ ಶ್ರೇಯಸ್ ಅಯ್ಯರ್ ಮನೀಶ್ ಪಾಂಡೆ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಧರ್ಮಶಾಲಾ ಮೈದಾನದಲ್ಲಿ ಬಹುತೇಕ ಚೇಸಿಂಗ್ ಮಾಡುವ ತಂಡವೇ ಗೆಲುವು ಸಾಧಿಸಿರುವುದರಿಂದ ಟೀಂ ಇಂಡಿಯಾ ಎಚ್ಚರಿಕೆಯಿಂದ ಆಡಬೇಕಿದೆ.

No Comments

Leave A Comment