Log In
BREAKING NEWS >
ಅಗಸ್ಟ್ 16ರಿ೦ದ ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಆರ೦ಭಗೊಳ್ಳಲಿದೆ....

ಫರಂಗಿಪೇಟೆ-ಮಾಣಿವರೆಗೆ ಸಚಿವ ರೈ ನೇತೃತ್ವದಲ್ಲಿ ಸಾಮರಸ್ಯ ನಡಿಗೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಾಮರಸ್ಯ ಮೂಡಿಸುವ ಆಶಯದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ಮಂಗಳವಾರ ಫರಂಗಿಪೇಟೆಯಿಂದ ಮಾಣಿವರೆಗೆ ಸಾಮರಸ್ಯ ನಡಿಗೆ ಸೌಹಾರ್ದತೆಯೆಡೆಗೆ ಕಾಲ್ನಡಿಗೆ ಜಾಥಾ ನಡೆಯಿತು.

ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಫರಂಗಿಪೇಟೆಯಿಂದ ಬಿಸಿ ರೋಡ್ ಮಾರ್ಗವಾಗಿ ಮಾಣಿವರೆಗಿನ ಸುಮಾರು 20 ಕಿ.ಮೀ. ಈ ಪಾದಯಾತ್ರೆ ನಡೆಯಲಿದೆ. ಜಾಥಾದಲ್ಲಿ ಪಕ್ಷಾತೀತವಾಗಿ ಸಮಾನ ಮನಸ್ಕರು ಭಾಗವಹಿಸಿದ್ದರು.

ಸಾಮರಸ್ಯ ನಡಿಗೆಯಲ್ಲಿ ಭಾಗವಹಿಸಿದ್ದವರಿಗೆ ಬಿಳಿ ಟೋಪಿ ನೀಡಲಾಗಿತ್ತು. ಮಧ್ಯಾಹ್ನ ಮೆಲ್ಕಾರ್ ನಲ್ಲಿ ಗಂಜಿ ಊಟದ ವ್ಯವಸ್ಥೆ ಮಾಡಲಾಗಿದೆ.

 

No Comments

Leave A Comment