Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಕೋಟದಲ್ಲಿ ಭೀಕರ ಅಪಘಾತ: ತಾಯಿ,ಮಗ ದಾರುಣ ಸಾವು

ಕುಂದಾಪುರ: ಇಲ್ಲಿನ ಕೋಟ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಮಂಗಳವಾರ ಭೀಕರ ಅಪಘಾತ ಸಂಭವಿಸಿದ್ದು, ಕಾರೊಂದು ನಿಯಂತ್ರಣ ತಪ್ಪಿ ರಸ್ತೆ ವಿಭಜಕವನ್ನು ಹಾರಿ  ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಲಾರಿಗೆ ಗುದ್ದಿದ ಪರಿಣಾಮವಾಗಿ ಅದರಲ್ಲಿದ್ದ  ತಾಯಿ ಮಗ ದಾರುಣವಾಗಿ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಮೃತರು ಬಾರ್ಕೂರು ಬೆಣ್ಣೆಕುದ್ರು ನಿವಾಸಿಗಳಾದತಾಯಿ ಗಿರಿಜಾ (52), ಮತ್ತು ಮಗ (ಅವಿನಾಶ್ (27)  ಎಂದು ತಿಳಿದು ಬಂದಿದೆ. ಗಾಯಾಳುಗಳಿಬ್ಬರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿತ್ತು.

 

ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment