Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗೆ ಚೂರಿ ಇರಿತ

ಶಿವಮೊಗ್ಗ: ಜಿಲ್ಲೆಯ ಖಾಸಗಿ ಕಾಲೆಜೊಂದರಲ್ಲಿ ನಡೆದ ಘಟನೆಯಲ್ಲಿ ಅಮಾಯಕ ವಿದ್ಯಾರ್ಥಿಯೊಬ್ಬನಿಗೆ ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಕೆ.ಎರ್‌.ಪುರಂನ ಶಬರೀಶ್‌ ಚೂರಿ ಇರಿತಕ್ಕೊಳಗಾದ ವಿದ್ಯಾರ್ಥಿ. ಕಾಲೇಜು ಮುಗಿದ ಬಳಿಕ ತನ್ನ ಗೆಳೆಯರೊಂದಿಗೆ ಪಾರ್ಕ್‌ನಲ್ಲಿ ಬಂದು ಕುಳಿತಿದ್ದಾಗ ನಾಲ್ವರು ದುಷ್ಕರ್ಮಿಗಳು ಬಂದು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಚಾಕು ಇರಿತಕ್ಕೊಳಗಾದ ವಿದ್ಯಾರ್ಥಿ ತೀವ್ರವಾಗಿ ಗಾಯಗೊಂಡಿದ್ದು ಸದ್ಯ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಈ ಘಟನೆ ಬಗ್ಗೆ ಪೊಲೀಸರು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಕೆಲ ಸಂಘಟನೆಯ ಪ್ರಮುಖರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಮದ್ಯರಾತ್ರಿಯವರೆಗೂ ಅಸ್ಪತ್ರೆಯ ಮುಂಬಾಗ ಜಮಾಯಿಸಿದ್ದರು. ಪೊಲೀಸರು ಆರೋಪಿಗಳನ್ನು ತಕ್ಷಣದಲ್ಲೇ ಬಂಧಿಸಬೇಕು ಇಲ್ಲವಾದ್ದಲ್ಲಿ ಉಗ್ರ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು. ಕೋಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳಿಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.

No Comments

Leave A Comment