Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

9ನೇ ತರಗತಿ ಬಾಲಕಿಯನ್ನು ಎಳೆದೊಯ್ದು ಗ್ಯಾಂಗ್ ರೇಪ್ & ಮರ್ಡರ್!

ವಿಜಯಪುರ: 9ನೇ ತರಗತಿ ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಘಟನೆ ವಿಜಯಪುರದಲ್ಲಿ ಮಂಗಳವಾರ ನಡೆದಿದ್ದು, ಕಾಮುಕರನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಬಾಲಕಿಯ ಪೋಷಕರು ತೀವ್ರ ಪ್ರತಿಭಟನೆ ನಡೆಸಿದ್ದಾರೆ.

ಅಂಬೇಡ್ಕರ್ ವೃತ್ತದಲ್ಲಿ ನಿನ್ನೆಯಿಂದ ಬಾಲಕಿಯ ಶವವಿಟ್ಟು ಪ್ರತಿಭಟನೆ ನಡೆಸಿದ್ದು, ಬುಧವಾರ ಬೆಳಗ್ಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಅಲ್ಲದೇ ಬಾಲಕಿಯ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 8 ಲಕ್ಷ ರೂಪಾಯಿ ಹಾಗೂ ತಾನು ವೈಯಕ್ತಿಕವಾಗಿ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದರು. ಬಳಿಕ ಬಾಲಕಿಯ ಪೋಷಕರು ಪ್ರತಿಭಟನೆಯನ್ನು ವಾಪಸ್ ತೆಗೆದುಕೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.

ಬಾಲಕಿ ಮೇಲೆ ಗ್ಯಾಂಗ್ ರೇಪ್:

ಶಾಲೆಗೆ ಹೋಗುತ್ತಿದ್ದ ಬಾಲಕಿ 9ನೇ ತರಗತಿ ವಿದ್ಯಾರ್ಥಿನಿ ದಾನೇಶ್ವರಿಯನ್ನು ಎಳೆದೊಯ್ದು ಕಾಮ ಪಿಶಾಚಿಗಳು ಆಕೆಯ ತಂಗಿ ಎದುರೇ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದರು ಎಂದು ವರದಿ ವಿವರಿಸಿದೆ.

ಆರೋಪಿಗಳನ್ನು ಬಂಧಿಸಬೇಕೆಂದು ಬಾಲಕಿಯ ಪೋಷಕರು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಮತ್ತೊಂದೆಡೆ ಪ್ರಕರಣ ಆದರ್ಶ ನಗರ ಠಾಣೆಯಲ್ಲಿ ದಾಖಲಿಸಿದ್ದು, ಶಂಕಿತ ಮೂವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದ್ದು, ಘಟನೆಗೆ ಸಂಬಂಧಪಟ್ಟ ನಿಜವಾದ ಆರೋಪಿಗಳನ್ನು ಪೊಲೀಸರು ಬಂಧಿಸಿಲ್ಲ ಎಂದು ಬಾಲಕಿಯ ಪೋಷಕರು ಹಾಗೂ ವಿವಿಧ ಸಂಘಟನೆಗಳು ಆರೋಪಿಸಿವೆ.

ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

No Comments

Leave A Comment