Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಬೆಂಗಳೂರು ಸನ್ನಿ ಲಿಯೋನ್ ರಸಮಂಜರಿ ಕಾರ್ಯಕ್ರಮಕ್ಕೆ ಏಕೆ ಅಡ್ಡಿ ಮಾಡುತ್ತಿದ್ದೀರಿ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ‘ಸನ್ನಿ ಲಿಯೋನ್ ರಸಮಂಜರಿ ಕಾರ್ಯಕ್ರಮಕ್ಕೆ ಏಕೆ ಅಡ್ಡಿ ಮಾಡುತ್ತಿದ್ದೀರಿ’ ಎಂದು ಸರ್ಕಾರಕ್ಕೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ.

‘ಯಾರೊ ಕೆಲವು 10 ಜನ ಪ್ರತಿಭಟನೆ ಮಾಡಿದರು ಎಂಬ ಒಂದೇ ಕಾರಣಕ್ಕೆ ಪೊಲೀಸರು ಮೌಖಿಕವಾಗಿ ಅನುಮತಿ ನಿರಾಕರಿಸಿದ್ದಾರೆ’ ಎಂದು ಕಾರ್ಯಕ್ರಮ ಆಯೋಜಕರ ಪರ ಹಾಜರಾಗಿದ್ದ ಹಿರಿಯ ವಕೀಲ ಉದಯ ಹೊಳ್ಳ ವಾದ ಮಂಡಿಸಿದರು.

‘ಅರ್ಜಿದಾರರ ಯಾವ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ’ ಎಂದು ನ್ಯಾಯಮೂರ್ತಿ ಬಿ.ವೀರಪ್ಪ ಅವರು ಪ್ರಶ್ನಿಸಿದರು.

ಕಾನೂನು ಸುವ್ಯವಸ್ಥೆ ಪಾಲನೆಗೆ ಏನು ಕ್ರಮ ಕೈಗೊಂಡಿದ್ದೀರಿ?, ನಗರದಲ್ಲಿ ಇಂತಹ ಬೇರೆ ಕಾರ್ಯಕ್ರಮ ಹೊಸ ವರ್ಷದ ವೇಳೆ ನಡೆಯಲು ಅನುಮತಿ ಕೊಟ್ಟಿದ್ದರೆ ಅವುಗಳ ವಿವರ ಕೊಡಿ.

ಬೇರೆ ಕಾರ್ಯಕ್ರಮಕ್ಕೆ ಅನುಮತಿ ನೀಡಿರುವಾಗ ಸನ್ನಿ ಲಿಯೋನ್ ಕಾರ್ಯಕ್ರಮಕ್ಕೆ ಏಕೆ ಕೊಡುತ್ತಿಲ್ಲ. ಸರ್ಕಾರದ ತಾರತಮ್ಯ ಸರಿಯಿಲ್ಲ. ಬೇರೆ ಕಾರ್ಯಕ್ರಮಗಳಿಗೆ ನೀಡಿರುವ ಅನುಮತಿ ರದ್ದುಪಡಿಸಲೇ ಎಂದು ಪ್ರಶ್ನಿಸಿದ ರಜಾಕಾಲದ ಏಕಸದಸ್ಯ ನ್ಯಾಯಪೀಠದಿಂದ ಸರ್ಕಾರಕ್ಕೆ ಮಂಗಳಾರತಿ ಮಾಡಲಾಯಿತು.

 

No Comments

Leave A Comment