Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

3ನೇ ದಿನಕ್ಕೆ ಕಾಲಿಟ್ಟ ಮಹದಾಯಿ ಅಹೋರಾತ್ರಿ ಧರಣಿ: ರೈತ ಅಸ್ವಸ್ಥ

ಬೆಂಗಳೂರು: ಮಹದಾಯಿ ವಿವಾದ ಇತ್ಯರ್ಥಪಡಿಸುವ ವಿಚಾರದಲ್ಲಿ ಬಿಎಸ್ ಯಡಿಯೂರಪ್ಪ ಮಾತಿಗೆ ತಪ್ಪಿರುವುದಾಗಿ ಆರೋಪಿಸಿ ಕಳೆದ ಮೂರು ದಿನಗಳಿಂದ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕೇಂದ್ರ ಕಚೇರಿ ಸಮೀಪ ಮಹದಾಯಿ ಹೋರಾಟಗಾರರು ಅಹೋರಾತ್ರಿ ಧರಣಿಯನ್ನು ಮುಂದುವರಿಸಿದ್ದು, ಸೋಮವಾರ ರೈತ ಹನುಮಂತಪ್ಪ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ತೀವ್ರವಾಗಿ ಅಸ್ವಸ್ಥಗೊಂಡಿದ್ದ ರೈತ ಹನುಮಂತಪ್ಪ ಅವರನ್ನು ಮಲ್ಲೇಶ್ವರಂನ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ತಿಳಿಸಿದೆ.

ಡಿಸೆಂಬರ್ 15ರೊಳಗೆ ಮಹದಾಯಿ ವಿವಾದವನ್ನು ಇತ್ಯರ್ಥಪಡಿಸುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರಿಗೆ ಭರವಸೆ ನೀಡಿದ್ದರು, ಆದರೆ ಇದೀಗ ಬಿಎಸ್ ವೈ ಅವರು ನೀಡಿರುವ ಭರವಸೆ ಸುಳ್ಳಾಗಿದ್ದು, ಈ ಹಿನ್ನೆಲೆಯಲ್ಲಿ ಖುದ್ದಾಗಿ ಯಡಿಯೂರಪ್ಪನವರು ಆಗಮಿಸಿ ಸಮಸ್ಯ ಇತ್ಯರ್ಥಪಡಿಸಲು ಮುಂದಾಗಬೇಕೆಂದು ಆಗ್ರಹಿಸಿ ಬಿಜೆಪಿ ಕಚೇರಿ ಮುಂದೆ ಮಹದಾಯಿ ಹೋರಾಟಗಾರರು ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ.

No Comments

Leave A Comment