Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಕುಡಿದ ಅಮಲಿನಲ್ಲಿ ಕಾರು ಚಾಲನೆ: ನ್ಯೂಜಿಲೆಂಡ್‌ನಲ್ಲಿ ಭಾರತೀಯ ವಿದ್ಯಾರ್ಥಿ ಸಾವು

ತೆಲಂಗಾಣ: ನ್ಯೂಜಿಲೆಂಡ್‌ನಲ್ಲಿ ಕುಡಿದ ಅಮಲಿನಲ್ಲಿ ಕಾರು ಚಲಾಯಿಸಿದ ಪರಿಣಾಮ ರಸ್ತೆ ಅಪಘಾತದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಹೈದರಾಬಾದ್‌ ಮೂಲದ ವಿದ್ಯಾರ್ಥಿ ಸೈಯದ್ ಅಬ್ದುಲ್ ರಹೀಮ್ ಫಹಾದ್(29 ವರ್ಷ) ನ್ಯೂಜಿಲೆಂಡ್‌ನ ಆಕ್ಲೆಂಡ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದು, ಜತೆಗೆ, ಬಿಡುವಿನ ವೇಳೆ ಟ್ಯಾಕ್ಸಿ ಚಾಲಕನಾಗಿ ಕೆಲಸ ಮಾಡುತ್ತಿದ್ದ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ಮೃತದೇಹವನ್ನು ನ್ಯೂಜಿಲೆಂಡ್‌ನಿಂದ ಭಾರತಕ್ಕೆ ತರಲು ನೆರವಾಗುವಂತೆ ವಿದೇಶಾಂಗ ವ್ಯವಹಾರ ಸಚಿವೆ ಸುಷ್ಮಾ ಸ್ವರಾಜ್‌ ಅವರಿಗೆ ಕುಟುಂಬ ಸದಸ್ಯರು ಮನವಿ ಮಾಡಿದ್ದಾರೆ.

ಪ್ರಕರಣ ಸಂಬಂಧ ಕುಟುಂಬಕ್ಕೆ ನೆರವಾಗುವಂತೆ ತೆಲಂಗಾಣದ ಬಿಜೆಪಿ ರಾಜ್ಯ ಘಟ‌ಕದ ಅಧ್ಯಕ್ಷ ಕೆ. ಲಕ್ಷ್ಮಣ್‌  ಸುಷ್ಮಾ ಸ್ವರಾಜ್‌ ಅವರಿಗೆ ಮನವಿ ಮಾಡಿದ್ದಾರೆ.

No Comments

Leave A Comment