Log In
BREAKING NEWS >
2020 ಮು೦ದಿನ ಪರ್ಯಾಯ ಮಹೋತ್ಸವವನ್ನು ನೆರವೇರಿಸಲಿರುವ ಶ್ರೀಅದಮಾರು ಮಠದ ಪರ್ಯಾಯಕ್ಕೆ ಶುಕ್ರವಾರದ೦ದು ಬಾಳೆ ಮಹೂರ್ತ-ಬೆಳಿಗ್ಗೆ 7.30ಕ್ಕೆ

ಮೂರು ಪಕ್ಷಗಳ ಮಾನ್ಯತೆ ರದ್ದು ಮಾಡಿ; ಆಯೋಗಕ್ಕೆ ರೈತರ ಮನವಿ

ಬೆಂಗಳೂರು: ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮಾನ್ಯತೆಯನ್ನು ರದ್ದು ಮಾಡಬೇಕೆಂದು ಮಹದಾಯಿ ಹೋರಾಟಗಾರ ರೈತರು ಚುನಾವಣಾ ಆಯೋಗಕ್ಕೆ ಮನವಿ ಸಲ್ಲಿಸಿದರು.

ಸಾವಿರಾರು ಮಂದಿ ಮಹದಾಯಿ ಹೋರಾಟಗಾರರು ಪಾದಯಾತ್ರೆ ಮೂಲಕ ರಾಜಭವನಕ್ಕೆ ತೆರಳಿ ಮನವಿ ಸಲ್ಲಿಸಿದರು. ಅಲ್ಲಿಂದ ಚುನಾವಣಾ ಆಯೋಗಕ್ಕೆ ಪಾದಯಾತ್ರೆ ಮೂಲಕ ಹೋಗಿ ಮನವಿ ಸಲ್ಲಿಸಿದರು.

ಮನವಿ ಸಲ್ಲಿಸಿ ಚಾಲುಕ್ಯ ಸರ್ಕಲ್ ಬಳಿ ಸುದ್ದಿಗಾರರ ಜತೆ ಮಾತನಾಡಿದ ಮಹದಾಯಿ ಹೋರಾಟ ಸಮಿತಿ ಅಧ್ಯಕ್ಷ ವೀರೇಶ್ ಸೊಬರದಮಠ, ಮೂರು ಪಕ್ಷಗಳ ಮಾನ್ಯತೆ ರದ್ದು ಮಾಡುವಂತೆ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಗೆ ಮನವಿ ಸಲ್ಲಿಸಿದ್ದೇವೆ.

ಸಿಎಂ ನಿವಾಸಕ್ಕೆ ತೆರಳಿ ಮನವಿ ಸಲ್ಲಿಸಿದ ನಂತರ ನಮ್ಮ ಮುಂದಿನ ಹೋರಾಟದ ರೂಪುರೇಷೆ ಬಗ್ಗೆ ನಿರ್ಧರಿಸುವುದಾಗಿ ಹೇಳಿದರು. ನಾವು ಕಳೆದ ಮೂರು ವರ್ಷಗಳಿಂದ ಹೋರಾಟ ನಡೆಸುತ್ತ ಬಂದಿದ್ದೇವೆ, ಈ ಹಿನ್ನೆಲೆಯಲ್ಲಿ ರಾಜಕೀಯ ಪ್ರೇರಿತ ಎಂಬ ಆರೋಪ, ಪ್ರತ್ಯಾರೋಗಳಿಗೆಲ್ಲ ಉತ್ತರಿಸೋದಿಲ್ಲ ಎಂದು ತಿಳಿಸಿದರು.

No Comments

Leave A Comment