Log In
BREAKING NEWS >
ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ಕ್ಯಾಂಡಲ್ ನಿಂದಾಗಿ ಬೆಂಕಿ ಅವಘಡ; ಬೆಂಗಳೂರಲ್ಲಿ ಒಂದೇ ಕುಟುಂಬದ ಮೂವರ ಸಾವು

ಬೆಂಗಳೂರು: ಕ್ಯಾಂಡಲ್ ನಿಂದಾಗಿ ಹೊತ್ತಿದ ಬೆಂಕಿ ಬಳಿಕ ಇಡೀ ಮನೆಗೆ ವ್ಯಾಪಿಸಿದ ಪರಿಣಾಮ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ನಡೆದಿದೆ.
ಮೂಲಗಳ ಪ್ರಕಾರ ಬೆಂಗಳೂರಿನ ಟಿನ್ ಫ್ಯಾಕ್ಟರಿ ಬಳಿಯ ಮಹದೇವಪುರದ ಉದಯನಗರದಲ್ಲಿ ಈ ಘಟನೆ ನಡೆದಿದ್ದು, ಮೃತರನ್ನು ಮನೆ ಮಾಲೀಕ 35 ವರ್ಷದ ಮುರುಗನ್, ಆಕೆಯ ಪತ್ನಿ ಸೋಫಿಯಾ (30 ವರ್ಷ) ಇವರಿಬ್ಬರ  ಮಗಳಾದ 6 ವರ್ಷದ ಫ್ಲೋರಾ ಎಂದು ಗುರುತಿಸಲಾಗಿದೆ. ಸ್ಥಳೀಯರು ನೀಡಿರುವ ಮಾಹಿತಿಯಂತೆ ಇಂದು ಬೆಳಗ್ಗೆ ಮನೆಯಿಂದ ಬರುತ್ತಿದ್ದ ಹೊಗೆಯನ್ನು ಗಮನಿಸಿ ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಯಿತು.
ವಿಚಾರ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಮುಂದಾದರು. ಆದರೆ ದುರಾದೃಷ್ಟವಶಾತ್ ಬೆಂಕಿ ನಂದಿಸಿ ಒಳಗಿದ್ದವನ್ನು ರಕ್ಷಿಸುವ ಹೊತ್ತಿಗೆ ಮೂವರೂ ಸಾವನ್ನಪ್ಪಿದ್ದರು.  ಪ್ರಸ್ತುತ ಮೂರೂ ಶವಗಳನ್ನು ಬೌರಿಂಗ್ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ರವಾನಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಮಹದೇವಪುರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದು, ಅಗ್ನಿ ಅವಘಡಕ್ಕೆ ನಿಜವಾದ ಕಾರಣ ಇನ್ನೂ ತಿಳಿದುಬಂದಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
No Comments

Leave A Comment