Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವರಾತ್ರೆಯ "ಚ೦ಡಿಕಾ ಹೋಮ " ಕಾರ್ಯಕ್ರಮವು 19-10-2018ರ೦ದು ಜರಗಲಿದೆ....

ಯಡಿಯೂರಪ್ಪ, ಕುಮಾರಸ್ವಾಮಿ ಅವರಪ್ಪನಾಣೆ ಮತ್ತೆ ಸಿಎಂ ಆಗಲ್ಲ: ಸಿದ್ದರಾಮಯ್ಯ

ಚಿಕ್ಕಬಳ್ಳಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಅವರಪ್ಪನಾಣೆಗೂ ಮತ್ತೆ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಹೇಳಿದ್ದಾರೆ.

ಇಂದು ಬಾಗೇಪಲ್ಲಿಯಲ್ಲಿ ಆಯೋಜಿಸಿದ್ದ ‘ನುಡಿದಂತೆ ನಡೆದಿದ್ದೇವೆ–ಸಾಧನಾ ಸಂಭ್ರಮ’ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ಮುಂದಿನ ವರ್ಷ ಏಪ್ರಿಲ್ ನಲ್ಲಿ ನಡೆಯುವ ವಿಧಾಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೀನಾಯ ಸೋಲು ಅನುಭವಿಸಲಿದ್ದು, ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ ಎಂದರು.

ನಾನು ಮುಖ್ಯಮಂತ್ರಿಯಾದರೆ ಎತ್ತಿನಹೊಳೆ ಯೋಜನೆಯನ್ನು ರದ್ದು ಮಾಡುವುದಾಗಿ ಕುಮಾರಸ್ವಾಮಿ ಹೇಳುತ್ತಾರೆ. ಆದರೆ ಯೋಜನೆಯನ್ನು ನಿಲ್ಲಿಸಲು ಅವರಿಂದ ಸಾಧ್ಯವಿಲ್ಲ. ಅವರು ರಾಜಕೀಯ ದುರುದ್ದೇಶದಿಂದ ಎತ್ತಿನಹೊಳೆ ಯೋಜನೆ ದುಡ್ಡು ಹೊಡೆಯುವ ಯೋಜನೆ ಎಂದು ಆರೋಪಿಸುತ್ತಾರೆ. ಅವರಿಗೆ ಈ ಭಾಗದ ಜನ ಬುದ್ಧಿ ಕಲಿಸಬೇಕು ಸಿಎಂ ಕರೆ ನೀಡಿದರು.

ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡ ಅವರು ತಮ್ಮ ಪುತ್ರ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಯಾಗಿ ನೋಡುವುದು ನನ್ನ ಆಸೆ ಎಂದು ಹೇಳುತ್ತಿದ್ದಾರೆ. ಆದರೆ ದಲಿತರೊಬ್ಬನ್ನು ಮುಖ್ಯಮಂತ್ರಿ ಮಾಡುತ್ತೇನೆ ಎಂದು ಈವರೆಗೂ ಹೇಳಿಲ್ಲ. ಅವರಿಗೆ ಕುಟುಂಬಸ್ಥರ ಹಿತಾಸಕ್ತಿ ಮುಖ್ಯವೇ ಹೊರತು ಸಾಮಾಜಿಕ ಹಿತಾಸಕ್ತಿಯಲ್ಲ ಸಿಎಂ ಮಾಜಿ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದರು.

ಇನ್ನು ಯಡಿಯೂರಪ್ಪ ಡಿಸೆಂಬರ್ 15ರ ಒಳಗೆ ಮಹದಾಯಿ ಸಮಸ್ಯೆ ಇತ್ಯರ್ಥ ಮಾಡುವುದಾಗಿ ಭರವಸೆ ನೀಡಿ ಮಾತು ತಪ್ಪಿದ್ದಾರೆ. ಈಗ ಹತಾಶೆಯಿಂದ ನನ್ನ ವಿರುದ್ಧ ಏಕವಚನದಲ್ಲಿ ಮಾತನಾಡುತ್ತಾರೆ ಎಂದರು.

No Comments

Leave A Comment