Log In
BREAKING NEWS >
ಅಮರನಾಥ ಯಾತ್ರೆ ವೇಳೆ ಕದನ ವಿರಾಮ ಮುಂದುವರೆಸಲು ಸರ್ಕಾರ ನಿರ್ಧಾರ: ಭದ್ರತಾ ಸಂಸ್ಥೆಗಳ ವಿರೋಧ....

ರಾಜ್ಯ ಬಿಜೆಪಿ ವಕ್ತಾರ ಸ್ಥಾನದಿಂದ ಗೋ ಮಧೂಸೂದನ್ ಗೆ ಕೊಕ್!

ಬೆಂಗಳೂರು:ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಬಹಿರಂಗವಾಗಿಯೇ ಅಸಮಾಧಾನ ಹೊರಹಾಕುತ್ತಿದ್ದ ಬಿಜೆಪಿ ಮುಖಂಡ ಗೋ ಮಧುಸೂದನ್ ಅವರನ್ನು ರಾಜ್ಯ ಬಿಜೆಪಿ ವಕ್ತಾರ ಸ್ಥಾನದಿಂದ ವಜಾಗೊಳಿಸಿದೆ ಎಂದು ಮಾಧ್ಯಮದ ವರದಿ ತಿಳಿಸಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಗೋ ಮಧುಸೂದನ್ ಈ ಹಿಂದೆಯೂ ರಾಯಣ್ಣ ಬ್ರಿಗೇಡ್ ವಿಚಾರದಲ್ಲಿಯೂ ವಕ್ತಾರ ಹುದ್ದೆಯಿಂದ ವಜಾಗೊಂಡಿದ್ದರು.

ಸೋಮವಾರ ಬಿಜೆಪಿ ಕಚೇರಿಯಲ್ಲಿ ರಾಜ್ಯ ಬಿಜೆಪಿ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವ್ಡೇಕರ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೋ ಮಧುಸೂದನ್ ಅವರಿಗೆ ಸುಮಾರು 2ಗಂಟೆಗಳ ಕಾಲ ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾಗಿದೆ.

ಇನ್ನು ಮುಂದೆ ಯಾವುದೇ ಚಾನೆಲ್ ಗಳ ಸಂವಾದದಲ್ಲಿ ಭಾಗವಹಿಸಬಾರದು ಎಂದು ಗೋ ಮಧುಸೂದನ್ ಗೆ ಸ್ಪಷ್ಟ ಸಂದೇಶ ರವಾನಿಸಲಾಗಿದೆ ಎಂದು ವರದಿ ವಿವರಿಸಿದೆ. ತನ್ನ ವಿರುದ್ಧ ಪದೇ, ಪದೇ ಅಸಮಾಧಾನ ಹೊರಹಾಕುತ್ತಿದ್ದ ಗೋ ಮಧುಸೂದನ್ ವಿರುದ್ಧ ಸಂತೋಷ್ ಅವರು ಬಿಜೆಪಿ ಹೈಕಮಾಂಡ್ ಗೆ ದೂರು ನೀಡಿದ್ದರು.

No Comments

Leave A Comment