Log In
BREAKING NEWS >
ಉಡುಪಿಯ ಶ್ರೀಲಕ್ಷ್ಮೀವೆoಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 118ನೇ ಭಜನಾ ಸಪ್ತಾಹ ಮಹೋತ್ಸವದ ನೇರ ಚಿತ್ರ-ವರದಿಯು ಕರಾವಳಿಕಿರಣ ಡಾಟ್ ಕಾoನಲ್ಲಿ ಪ್ರಸಾರ ಮಾಡಲಾಗುತ್ತಿದೆ

ಮತ್ತೆ ವೈದ್ಯರ ಮುಷ್ಕರ: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಿಶ್ರ ಪ್ರತಿಕ್ರಿಯೆ

ನವದೆಹಲಿ: ಭಾರತೀಯ ವೈದ್ಯಕೀಯ (ಎಂಸಿಐ) ರದ್ದು ಮಾಡಿ ಅದರ ಬದಲು ರಾಷ್ಟ್ರೀಯ ವೈದ್ಯ ಆಯೋಗ (ಎನ್ಎಂಸಿ) ರಚನೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ರಾಷ್ಟ್ರೀಯ ವೈದ್ಯ ಆಯೋಗ ಮಸೂದೆ-2017ನ್ನು ವಿರೋಧಿಸಿ ಮಂಗಳವಾರ ದೇಶಾದ್ಯಂತ ಹೊರ ರೋಗಿಗಳ ವಿಭಾಗವನ್ನು ಬಂದ್ ಮಾಡಿ ಪ್ರತಿಭಟನೆಗೆ ವೈದ್ಯರು ಕರೆ ನೀಡಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಂದ್’ಗೆ ಕರೆ ನೀಡಿದ್ದು, ಖಾಸಗಿ ಆಸ್ಪತ್ರೆಗಳ ಹೊರರೋಗಿ ವಿಭಾಗ ಬೆಳಿಗ್ಗೆ 6 ರಿಂದ ಸಂಜೆ 6ರವರೆಗೆ ಒಟ್ಟು 12 ಗಂಟೆಗಳ ಕಾಲ ಮುಶ್ಕರ ನಡೆಸುವಂತೆ ಕರೆ ನೀಡಿದೆ. ಆದರೆ, ತುರ್ತು ವಿಭಾಗಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ತಿಳಿದುಬಂದಿದೆ.

ಭಾರತೀಯ ವೈದ್ಯಕೀಯ ಸಂಘ ಕರೆ ನೀಡಿರುವ ಪ್ರತಿಭಟನೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ. ನಗರದ ಕೆಲ ಆಸ್ಪತ್ರೆಗಳು ಎಂದಿನಂತೆ ತನ್ನ ಕಾರ್ಯಗಳನ್ನು ನಿರ್ವಹಿಸುತ್ತಿದ್ದು, ರಾಯಚೂರು ಸೇರಿದಂತೆ ಕೆಲವೆಡೆ ಬಂದ್ ಗೆ ಉತ್ತಮ ಪ್ರತಿಕ್ರಿಯೆಗಳು ವ್ಯಕ್ತವಾಗತೊಡಗಿವೆ ಎಂದು ವರದಿಗಳು ತಿಳಿಸಿವೆ.

ಕಳೆದ ಶುಕ್ರವಾರ ‘ವೈದ್ಯ ಆಯೋಗ ಮಸೂದೆ’ ಲೋಕಸಭೆಯಲ್ಲಿ ಮಂಡನೆಯಾಗಿದ್ದು, ಮಂಗಳವಾರ ಚರ್ಚೆಗೆ ಬರುವ ಸಾಧ್ಯತೆಗಳಿವೆ. ವಿಧೇಯಕದ ಅನುಸಾರ ಭ್ರಷ್ಟಾಚಾರದ ಆರೋಪ ಹೊತ್ತಿರುವ ಭಾರತೀಯ ವೈದ್ಯಕೀಯ ಪರಿಷತ್ತು (ಎಂಸಿಐ) ರದ್ದಾಗಲಿದ್ದು, ಇದರ ಬದಲಿಗೆ ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್ಎಂಸಿ) ಅಸ್ತಿತ್ವಕ್ಕೆ ಬರಲಿದೆ.

No Comments

Leave A Comment