Log In
BREAKING NEWS >
ನೇಪಾಳದಲ್ಲಿ ಭಾರತದ 2000, 500, 200 ರೂ. ಮುಖಬೆಲೆಯ ನೋಟು ಬ್ಯಾನ್!.....ರಾಜಸ್ಥಾನ: ಅಶೋಕ್‌ ಗೆಹ್‌ಲೋಟ್‌ ಸಿಎಂ,ಸಚಿನ್‌ ಪೈಲಟ್‌ ಡೆಪ್ಯುಟಿ ಸಿಎಂ

ಬುದುಕಲಿಲ್ಲ ಬಶೀರ್‌; ಮಂಗಳೂರಿನಲ್ಲಿ ವ್ಯಾಪಕ ಕಟ್ಟೆಚ್ಚರ

ಮಂಗಳೂರು: ಕೊಟ್ಟಾರ ಚೌಕಿ ಬಳಿ ಜ.3ರಂದು  ದುಷ್ಕರ್ಮಿಗಳಿಂದ ಮಾರಣಾಂತಿಕ ದಾಳಿಗೊಳಗಾಗಿ  ಎಜೆ ಆಸ್ಪತ್ರೆಯಲ್ಲಿ ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ  ಫಾಸ್ಟ್‌ ಫುಡ್‌ ವ್ಯಾಪಾರಿ ಅಬ್ದುಲ್‌ ಬಶೀರ್‌(45) ಇಂದು ಭಾನುವಾರ ಬೆಳಗ್ಗೆ ಚಿಕಿತ್ಸೆ ಫ‌ಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಈಗಾಗಲೇ  ಕೊಲೆಗೆ ಯತ್ನಿಸಿದ ನಾಲ್ವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಜ. 3ರಂದು ಕಾಟಿಪಳ್ಳದಲ್ಲಿ ಹಿಂದೂ ಸಂಘಟ ನೆಯ ಕಾರ್ಯಕರ್ತ ದೀಪಕ್‌ ರಾವ್‌ ಅವರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವುದಕ್ಕೆ ಪ್ರತೀಕಾರವಾಗಿ ಬಶೀರ್‌ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು.

ಬಶೀರ್‌ ಸಾವಿನ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ವ್ಯಾಪಕ ಪೊಲೀಸ್‌ ಬಂದೋಬಸ್ತ್ ಮಾಡಲಾಗಿದ್ದು ಸೆಕ್ಷನ್‌ 144 ಜಾರಿ ಮಾಡಲಾಗಿದೆ.

No Comments

Leave A Comment