Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

700 ಕೋಟಿ ವೆಚ್ಚದಲ್ಲಿ ದೇಶಾದ್ಯಂತ 8,500 ಭಾರತೀಯ ರೈಲ್ವೆ ನಿಲ್ದಾಣಗಳಲ್ಲಿ ಉಚಿತ ವೈ-ಫೈ!

ನವದೆಹಲಿ: ಗ್ರಾಮೀಣ ಮತ್ತು ಕುಗ್ರಾಮದಲ್ಲಿರುವ ರೈಲ್ವೆ ನಿಲ್ದಾಣಗಳು ಸೇರಿದಂತೆ ದೇಶಾದ್ಯಂತ ಇರುವ 8,500 ನಿಲ್ದಾಣಗಳಲ್ಲಿ ಸುಮಾರು 700 ಕೋಟಿ ರುಪಾಯಿ ವೆಚ್ಚದಲ್ಲಿ ವೈ-ಫೈ ಸೌಲಭ್ಯ ಒದಗಿಸಲು ರೈಲ್ವೆ ಇಲಾಖೆ ಮಂದಾಗಿದೆ.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷೀಯ ಡಿಜಿಟಲ್ ಇಂಡಿಯಾ ಭಾಗವಾಗಿ ಸದ್ಯ 216 ಪ್ರಮುಖ ರೈಲು ನಿಲ್ದಾಣಗಳಲ್ಲಿ ಉಚಿತ ವೈ-ಫೈ ಸೇವೆಗಳನ್ನು ನಿಯೋಜಿಸಲಾಗಿದ್ದು ಉಚಿತ ಇಂಟರ್ನೆಟ್ ಸೌಲಭ್ಯದ ಮೂಲಕ ಸುಮಾರು ಎಪ್ಪತ್ತು ಲಕ್ಷ ರೈಲ್ವೆ ಪ್ರಯಾಣಿಕರು ಈ ಸೇವೆಯನ್ನು ಪಡೆಯುತ್ತಿದ್ದಾರೆ.

ಡಿಜಿಟಲ್ ಯುಗದಲ್ಲಿ ದಿನನಿತ್ಯದ ಕೆಲಸಗಳಲ್ಲಿ ಇಂಟರ್ ನೆಟ್ ಪ್ರಮುಖ ಅವಶ್ಯಕತೆಯಾಗಿದೆ. ಇದರಿಂದಾಗಿ ದೇಶದ ಎಲ್ಲಾ ರೈಲು ನಿಲ್ದಾಣಗಳಲ್ಲಿ ನಾವು ಈ ಸೌಲಭ್ಯವನ್ನು ಒದಗಿಸುತ್ತೇವೆ ಎಂದು ರೈಲ್ವೆ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಯೋಜನೆ ಪ್ರಕಾರ, ಪ್ರಾಥಮಿಕವಾಗಿ ರೈಲು ಪ್ರಯಾಣಿಕರಿಗೆ ಈ ಸೌಲಭ್ಯಕ್ಕಾಗಿ ಪೂರೈಸಲು   1,200 ರೈಲ್ವೆ ನಿಲ್ದಾಣಗಳನ್ನು ಗುರುತಿಸಲಾಗಿದೆ. ನಂತರ ಗ್ರಾಮೀಣ ಹಾಗೂ ಕುಗ್ರಾಮದಲ್ಲಿರುವ ರೈಲು ನಿಲ್ದಾಣಗಳು ಸೇರಿದಂತೆ 7,300 ನಿಲ್ದಾಣಗಳಲ್ಲಿ ಈ ಸೇವೆಯನ್ನು ಒದಗಿಸಲು ಕ್ರಮಕೈಗೊಳ್ಳಲಾಗುತ್ತದೆ ಎಂದರು.

ಇ-ಆಡಳಿತವನ್ನು ಉತ್ತೇಜಿಸಲು ಗ್ರಾಮೀಣ ಭಾಗಗಳಲ್ಲಿ ಡಿಜಿಟಲ್ ಸೇವೆ ಒದಗಿಸುವ ಸಲುವಾಗಿ ವೈ-ಫೈ ಸೌಲಭ್ಯವನ್ನು ಸ್ಥಳೀಯ ಜನರಿಗೆ ನೀಡಲಾಗುವುದು ಎಂದರು.

No Comments

Leave A Comment