Log In
BREAKING NEWS >
ಉಡುಪಿಯ ಕಿನ್ನಿಮುಲ್ಕಿಯಲ್ಲಿ ಜನವರಿ 17ರ೦ದು ಸಾಯ೦ಕಾಲ 7ಗ೦ಟೆಗೆ ಉಡುಪಿಯ ಖ್ಯಾತ ಉದ್ಯಮಿ ಹಾಗೂ ಕಾ೦ಗ್ರೆಸ್ ಮುಖ೦ಡರಾದ ಕೆ.ಕೃಷ್ಣಮೂರ್ತಿ ಆಚಾರ್ಯ ಹಾಗೂ ನಗರ ಸಭಾ ಸದಸ್ಯರಾದ ಶ್ರೀಅಮೃತ ಕೃಷ್ಣಮೂರ್ತಿ ಆಚಾರ್ಯರವರ ಸಾರಥ್ಯದಲ್ಲಿ ನೂತನ ಯಶೋಧ ಆಟೋ ರಿಕ್ಷಾ ಅಸೋಸಿಯೇಷನ್ ಶುಭಾರ೦ಭಗೊಳ್ಳಲಿದೆ.

ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿ ಘಟನೆ ಬೆಂಗಳೂರಿನಲ್ಲಿ ಬೆಂಕಿ ಅವಘಡ: ಐವರು ಸಜೀವ ದಹನ

ಬೆಂಗಳೂರು: ನಗರದ ಕಲಾಸಿಪಾಳ್ಯ ಮಾರುಕಟ್ಟೆ ಪ್ರದೇಶದಲ್ಲಿರುವ ಕೈಲಾಸ್ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಐವರು ಸಜೀವವಾಗಿ ದಹನವಾಗಿದ್ದಾರೆ.

ತುಮಕೂರಿನ ಸ್ವಾಮಿ (23), ಪ್ರಸಾದ್ (20), ಹಾಸನದ ಮಂಜುನಾಥ್ (45), ಮಂಡ್ಯದ ಕೀರ್ತಿ (24) ಹಾಗೂ ಮಹೇಶ್ ( 35)  ಮೃತರು. ಇವರೆಲ್ಲ ಬಾರ್ ಆ್ಯಂಡ್ ರೆಸ್ಟೊರಂಟ್‌ನಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರ ರಾತ್ರಿ ಕೆಲಸ ಮುಗಿಸಿ ಮಲಗಿದ್ದಾಗ ಈ ಅವಘಡ ಸಂಭವಿಸಿದೆ.

ಸದ್ಯಕ್ಕೆ ಘಟನೆಗೆ ಕಾರಣವೇನೆಂಬುದು ತಿಳಿದುಬಂದಿಲ್ಲ. ನಸುಕಿನಲ್ಲಿ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

No Comments

Leave A Comment