Log In
BREAKING NEWS >
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಶ್ರೀಶಾರದಾ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಶಾರದಾ ವಿಗ್ರಹ ಇ೦ದು ವಿಸರ್ಜನಾ ಮೆರವಣಿಗೆಗೆ ಸಕಲ ಸಿದ್ದತೆ........ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 24-10-2018ನೇ ಬುಧವಾರದ೦ದು ಚ೦ಡಿಕಾ ಹೋಮ ಕಾರ್ಯಕ್ರಮವು ಜರಗಲಿರುತ್ತದೆ.....

ದಲಿತ ಪರ ಸಂಘಟನೆಗಳಿಂದ ಪ್ರತಿಭಟನೆ ಹುಬ್ಬಳಿಯಲ್ಲಿ ಬಂದ್ ಬಿಸಿ: ವಾಹನಗಳ ಮೇಲೆ ಕಲ್ಲು ತೂರಾಟ

ಹುಬ್ಬಳ್ಳಿ: ವಿಜಯಪುರದ ದಲಿತ ಬಾಲಕಿ ಮೇಲಿನ ಅತ್ಯಾಚಾರ, ಸಂವಿಧಾನ ಕುರಿತು ಸಚಿವ ಅನಂತಕುಮಾರ ಹೆಗಡೆ ಹೇಳಿಕೆ ಹಾಗೂ ಮಹಾರಾಷ್ಟ್ರದ ಕೋರೆಗಾಂವ್‌ನಲ್ಲಿ ದಲಿತರ ಮೇಲಿನ ದೌರ್ಜನ್ಯ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳು ಸೋಮವಾರ ಕರೆ ನೀಡಿದ್ದ ಬಂದ್ ಹಿನ್ನೆಲೆಯಲ್ಲಿ ಇಲ್ಲಿನ ಚನ್ನಮ್ಮ ವೃತ್ತ ಸುತ್ತಮುತ್ತ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿಸಲಾಯಿತು.

ದೇಶಪಾಂಡೆನಗರದಲ್ಲಿ ಸಿಬ್ಬಂದಿಯನ್ನು ಕರೆದೊಯ್ಯುತ್ತಿದ್ದ ವಿಆರ್‌ಎಲ್‌ಬಸ್ ಮೇಲೆ ಕಲ್ಲು ತೂರಿದ್ದರಿಂದ ಗಾಜು ಪುಡಿಯಾಯಿತು. ಬಸ್ ನಿಲ್ದಾಣದ ಮುಂದೆ ವಿಆರ್‌ಎಲ್‌ಬಸ್‌ಗೆ ಕಲ್ಲು ತೂರಲಾಯಿತು. ಆಟೊ, ಕಾರುಗಳ ಮೇಲೆ ಕಲ್ಲು ತೂರಲಾಗಿದೆ.

ಹಳೇ ಬಸ್ ನಿಲ್ದಾಣದ ನಿಯಂತ್ರಣಾ ಕೊಠಡಿ ಮೇಲೆ ಕಲ್ಲು ತೂರಲಾಗಿದ್ದು ಗಾಜು ಜಖಂಗೊಂಡಿದೆ. ಉಳಿದಂತೆ ಪ್ರತಿಭಟನಾಕಾರರು ಅಲ್ಲಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.

ಶಾಲಾ ಕಾಲೇಜುಗಳಿಗೆ ರಜೆ: ಬಂದ್ ಹಿನ್ನೆಲೆಯಲ್ಲಿ ಇಲ್ಲಿನ ಕೇಂದ್ರೀಯ ವಿದ್ಯಾಲಯ ಸೇರಿದಂತೆ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ.

No Comments

Leave A Comment