Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಮಹದಾಯಿ ನೀರು ವಿವಾದ: ರಾಜ್ಯದಲ್ಲಿ 27ರ ಬದಲು 25ರಂದು ಬಂದ್ ಗೆ ವಾಟಾಳ್ ಕರೆ

ಬೆಂಗಳೂರು: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ ಇದೇ 25ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಜತೆಗೆ 28ಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಲು ನಿರ್ಧರಿಸಲಾಗಿದೆ.

ಈ ಸಂಬಂಧ ಕನ್ನಡ ಚಳವಳಿ ವಾಟಾಳ್‌ ಪಕ್ಷದ ವಾಟಾಳ್‌ ನಾಗರಾಜ್‌ ಮತ್ತು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದು ತಿಳಿಸಿದ್ದಾರೆ. ಈ ಮೊದಲು ಇದೇ 27ಕ್ಕೆ ಬಂದ್‌ ಆಚರಿಸಲು ನಿರ್ಧರಿಸಲಾಗಿತ್ತು. ಆದರೆ, ಸಾಲುಸಾಲು ರಜೆಗಳಿರುವುದರಿಂದ ಎರಡು ದಿನ ಮೊದಲು ಅಂದರೆ 25ಕ್ಕೇ ಬಂದ್‌ ಆಚರಿಸಲು ನಿರ್ಧರಿಸಲಾಗಿದೆ ಎಂದಿದ್ದಾರೆ.

ಮಹದಾಯಿಗಾಗಿ ಕಳೆದ ಮೂರು ವರ್ಷಗಳಿಂದ ಉತ್ತರ ಕರ್ನಾಟಕದ ಜನ ಪರಿತಪಿಸುತ್ತಿದ್ದಾರೆ. ಆದರೆ, ಬಿಜೆಪಿ ನಾಯಕರು ದಿನಕ್ಕೊಂದು ಹೇಳಿಕೆ ನೀಡುವ ಮೂಲಕ ಜನರಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ. ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಹಾಗೂ ಬಿಜೆಪಿ ನಾಯಕರ ಧೋರಣೆ ಖಂಡಿಸಿ 25ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ರಾಜ್ಯಾದ್ಯಂತ ಬಂದ್‌ ಆಚರಿಸಲಾಗುವುದು ಎಂದು ವಾಟಾಳ್‌ ನಾಗರಾಜ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ರಾಜ್ಯ ಬಂದ್ ಗೆ ಡಾ.ರಾಜ್‌ಕುಮಾರ್‌ ಅಭಿಮಾನಿಗಳ ಸಂಘ, ಕರ್ನಾಟಕ ರಕ್ಷಣಾ ವೇದಿಕೆ, ಕನ್ನಡ ಚಿತ್ರರಂಗ ಸೇರಿದಂತೆ ರಾಜ್ಯದ ನೂರಾರು ಕನ್ನಡಪರ ಸಂಘಟನೆಗಳು ಕೈಜೋಡಿಸಿವೆ. ಅಂದು ಬೆಳಿಗ್ಗೆ 10ಕ್ಕೆ ಬೆಂಗಳೂರಿನ ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ಹೊರಡಲಿದೆ.

No Comments

Leave A Comment