Log In
BREAKING NEWS >
ಮಾರ್ಚ್ 23 ರಿಂದ ಏಪ್ರಿಲ್ 6 ವರಗೆ SSLC ಪರೀಕ್ಷೆ ನಡೆಯಲಿದೆ. ಪರೀಕ್ಷೆ ದಿನಾ ಬೆಳಿಗ್ಗೆ 9 ರಿಂದ 1:30 ರ ವರೆಗೆ ನಡೆಯಲಿದೆ........ಉಡುಪಿ ನಗರದಲ್ಲಿ ಕುಡಿಯುವ ನೀರಿನ ಅಭಾವ ಸ೦ಭವ...ನೀರನ್ನು ಪೋಲು ಮಾಡದೇ ನೀರನ್ನು ಮಿತವಾಗಿ ಬಳಸುವ೦ತೆ ಸಮಸ್ತ ನಾಗರಿಕರಲ್ಲಿ ಕರಾವಳಿಕಿರಣ ಡಾಟ್ ಕಾ೦ ಬಳಗ ವಿನ೦ತಿ

ಅಗ್ನಿ ಅವಘಡ: ರಾಜಸ್ತಾನ ಮತ್ತು ಗುಜರಾತ್ ನಲ್ಲಿ 8 ಮಂದಿ ಸಾವು!

ನವದೆಹಲಿ: ರಾಜಸ್ತಾನ ಮತ್ತು ಗುಜರಾತ್ ನಲ್ಲಿ ನಡೆದ ಎರಡು ಪ್ರತ್ಯೇಕ ಅಗ್ನಿ ಅವಘಡದಲ್ಲಿ ಶನಿವಾರ ಒಟ್ಟು 8 ಮಂದಿ ಸಾವನ್ನಪ್ಪಿದ್ದಾರೆ.

ಗುಜರಾತ್ ನ ರಾಜ್ ಕೋಟ್ ಜಿಲ್ಲೆಯ ಪ್ನಾಂಸ್ಲಾ ಗ್ರಾಮದಲ್ಲಿ ಆಯೋಜನೆಯಾಗಿರುವ ರಾಷ್ಟ್ರಕಥಾ ಶಿಬಿರದಲ್ಲಿ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿ, ಶಿಬಿರದಲ್ಲಿ ಪಾಲ್ಗೊಂಡಿದ್ದ ಯುವಕರ ಪೈಕಿ ಮೂವರು ಯುವತಿಯರು  ಸಾವನ್ನಪ್ಪಿದ್ದಾರೆ. ಇನ್ನು ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವಿಚಾರ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಪ್ರಸ್ತುತ  ಬೆಂಕಿಯನ್ನು ನಂದಿಸಿದ್ದಾರೆ.

ಶ್ರೀವೇದಿಕ್ ಮಿಷನ್ ಟ್ರಸ್ಟ್ ಈ  10 ದಿನಗಳ ಯುವಕರ ಶಿಬಿರವನ್ನು ಆಯೋಜನೆ ಮಾಡಿದ್ದು, ಕಳೆದ 18 ವರ್ಷಗಳಿಂದಲೂ ಸಂಸ್ಥೆ ಈ ಶಿಬಿರವನ್ನು ಆಯೋಜಿಸುತ್ತಾ ಬಂದಿದೆ ಎಂದು ತಿಳಿದುಬಂದಿದೆ. ರಾಷ್ಟ್ರೀಯ ಏಕೀಕರಣ,  ಸಾಮಾಜಿಕ ಸಂಘಟನೆ ಮತ್ತು ಧಾರ್ಮಿಕ ಸಾಮರಸ್ಯ ಮತ್ತು ಮಾರ್ಷಲ್ ಆರ್ಟ್ಸ್ ಗಳನ್ನು ಈ ಶಿಬಿರದಲ್ಲಿ  ಕಲಿಸಲಾಗುತ್ತಿದೆ ಎಂದು ತಿಳಿದುಬಂದಿದೆ. ಗಾಂಧಿನಗರದಿಂದ ಸುಮಾರು 360 ಕಿ.ಮೀ ದೂರದಲ್ಲಿರುವ ಪ್ರಾಂಸ್ಲಾ ಗ್ರಾಮದಲ್ಲಿ  ರಾಷ್ಟ್ರಕಥಾ ಶಿಬಿರ ಆಯೋಜನೆಯಾಗಿತ್ತು. ಆದರೆ ಕಳೆದ ರಾತ್ರಿ ಅಗ್ನಿ ಅವಘಡ ಸಂಭವಿಸಿದೆ.

ಮತ್ತೊಂದು ಪ್ರಕರಣದಲ್ಲಿ ರಾಜಸ್ತಾನದ ಜೈಪುರದ ಮನೆಯಲ್ಲಿ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಒಂದೇ ಕುಟುಂಬದ 8 ಮಂದಿ ಬಲಿಯಾಗಿದ್ದಾರೆ. ಜೈಪುರದ ಸೆಕ್ಟರ್ 9 ಪ್ರದೇಶದಲ್ಲಿರುವ ವಿದ್ಯಾನಗರದಲ್ಲಿರುವ ಮನೆಯಲ್ಲಿ  ಸಿಲಿಂಡರ್ ಸ್ಫೋಟಗೊಂಡಿದೆ. ಅಂತೆಯೇ ಘಟನೆಯಲ್ಲಿ ಮೂವರು ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

No Comments

Leave A Comment