Log In
BREAKING NEWS >
ಉಡುಪಿ:ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ 118ನೇ ಭಜನಾ ಸಪ್ತಾಹ ಮಹೋತ್ಸವದ ಶುಭಾರoಭಕ್ಕೆ ಕ್ಷಣಗಣನೆ....ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ;೧೧೮ನೇ ಭಜನಾ ಸಪ್ತಾಹ ಮಹೋತ್ಸವದ 1`ದಿನ ಶ್ರೀದೇವರಿಗೆ ಮತ್ಸ್ಯಲoಕಾರ

ಕರಾಳ ಶನಿವಾರ: ಪ್ರತ್ಯೇಕ ಅಪಘಾತದಲ್ಲಿ ಹಾಸನದಲ್ಲಿ 8, ಕೋಲಾರದಲ್ಲಿ 3, ಕಾರವಾರದಲ್ಲಿ ಓರ್ವ ಸಾವು

ಬೆಂಗಳೂರು: ಕರ್ನಾಟಕದ ಪಾಲಿಗೆ ಈ ಶನಿವಾರ ಕರಾಳವಾಗಿದ್ದು, ಮೂರು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಟ್ಟು 12 ಮಂದಿ ಸಾವಿಗೀಡಾಗಿದ್ದಾರೆ.

ಹಾಸನ ಜಿಲ್ಲೆಯ ಶಾಂತಿಗ್ರಾಮ ಬಳಿ ಕೆಎಸ್ ಆರ್ ಟಿಸಿಯ ಐರಾವತ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದರೆ, ಕೋಲಾರದ ಮುಳಬಾಗಿಲು ಸಮೀಪ ಅಪ್ಪೆ ಆಟೋ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದಾರೆ. ಮುಳಬಾಗಿಲು ತಾಲೂಕಿನ ಗಾಜಲಬಾವಿ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದ್ದು, ಮೃತರನ್ನು ಭಾಸ್ಕರ್ (35 ವರ್ಷ), ಪಾರ್ವತಮ್ಮ (38 ವರ್ಷ) ಹಾಗೂ ಗೌರಮ್ಮ ಎಂದು ಗುರುತಿಸಲಾಗಿದೆ. ಮೃತ್ತರೆಲ್ಲರೂ ಬಂಗಾರಪೇಟೆಯ ಸಣ್ಣಕುಪ್ಪಂ ಗ್ರಾಮದ ಮೂಲದವರು ಎಂದು ತಿಳಿದುಬಂದಿದೆ.

ಕುಟುಂಬ ಸಮೇತ ಮುಳಬಾಗಿಲು ಬಳಿಯ ಖಾದ್ರಿಪುರ ಶನಿಮಹಾತ್ಮ ದೇವಾಲಯಕ್ಕೆ ಹೋಗಿ ಬರುವಾಗ ಈ ದುರ್ಘಟನೆ ಸಂಭವಿಸಿದ್ದು,  ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೋಲಾರ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಸ್ಥಳಕ್ಕೆ ಮುಳಬಾಗಿಲು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಮತ್ತೊಂದು ಅಪಘಾತ ಪ್ರಕರಣದಲ್ಲಿ ಉತ್ತರಕನ್ನಡ ಜಿಲ್ಲೆಯ ಕಾರವಾರಜಲ್ಲಿ ಕ್ರೂಸರ್ ವಾಹನ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕ್ರೂಸರ್ ವಾಹನದಲ್ಲಿದ್ದ ಓರ್ವ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಅಂತೆಯೇ ಪ್ರಕರಣದಲ್ಲಿ 10 ಮಂದಿಗೆ ಗಾಯವಾಗಿದ್ದು, ಗಾಯಾಳುಗಳನ್ನು ಕಾರವಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಕಾರವಾರದ ತಾಲ್ಲೂಕಿನ ಚೆಂಡಿಯಾ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಮೃತನನ್ನು 50 ವರ್ಷದ ನಿಂಗಪ್ಪ ಎಂದು ಗುರುತಿಸಲಾಗಿದೆ. ಕ್ರೂಸರ್ ಚಾಲಕ ನಿದ್ದೆ ಮಂಪರಿನಲ್ಲಿ ವಾಹನ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ವಾಹನದಲ್ಲಿದ್ದವರೆಲ್ಲರೂ ಕುಷ್ಠಗಿ ಮೂಲದವರಾಗಿದ್ದು, ಗೋವಾ ಕಡೆಗೆ ತೆರಳುತ್ತಿದ್ದರು ಎಂದು ತಿಳಿದುಬಂದಿದೆ. ಕಾರವಾರ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಪ್ರದೇಶಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

No Comments

Leave A Comment