Log In
BREAKING NEWS >
ಡಿಸೆ೦ಬರ್ 13ರಿ೦ದ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ 90ನೇ ಭಜನಾ ಸಪ್ತಾಹ ಮಹೋತ್ಸವ ಆರ೦ಭಗೊಳ್ಳಲಿದೆ....

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದ ಕಲಾಪದಲ್ಲಿ ಶಾಸಕರು ಸಕ್ರಿಯವಾಗಿ ಭಾಗವಹಿಸಿ, ವಿರೋಧ ಪಕ್ಷಗಳ ಟೀಕೆಗಳಿಗೆ ಸಮರ್ಥವಾಗಿ ಉತ್ತರ ಕೊಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಕ್ಷದ ಶಾಸಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಬೆಳಗಾವಿಯಲ್ಲಿ ನಡೆಯುತ್ತಿರುವ

ಬೆಂಗಳೂರು: ಬಾಲ ಕಾರ್ಮಿಕಳಾಗಿ 12 ವರ್ಷಗಳನ್ನು ಕಳೆದ ಕನಕ ವಿ ಎಂಬ ಬಾಲಕಿ ಮಕ್ಕಳ ಹಕ್ಕುಗಳ ಬಗ್ಗೆ ಇದೇ 20ರಂದು ಸಂಸತ್ತಿನಲ್ಲಿ ಸಾರ್ವತ್ರಿಕ ಮಕ್ಕಳ ಹಕ್ಕು ದಿನಾಚರಣೆಯಲ್ಲಿ ಮಾತನಾಡಲಿದ್ದಾಳೆ. ವಿಶ್ವಸಂಸ್ಥೆ ಅಂತಾರಾಷ್ಟ್ರೀಯ ಮಕ್ಕಳ ತುರ್ತು ನಿಧಿ(ಯುನಿಸೆಫ್) ಆಯೋಜಿಸಿರುವ ಕಾರ್ಯಕ್ರಮದಲ್ಲಿ ಸಂಸತ್ತಿನಲ್ಲಿ ಭಾಷಣ ಮಾಡಲು ಆಯ್ಕೆಯಾದ ದೇಶದಾದ್ಯಂತ 30 ಮಕ್ಕಳ ಪೈಕಿ ಕರ್ನಾಟಕದಿಂದ

ಬೆಂಗಳೂರು: ಸಿಲಿಂಡರ್ ಸೋರಿಕೆಯಿಂದ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಹೆಬ್ಬಗೋಡಿಯ ಒಂದೇ ಕುಟುಂಬದ ನಾಲ್ವರಲ್ಲಿ ಮೂವರು ಮೃತಪಟ್ಟಿದ್ದಾರೆ. ನಾಲ್ಕನೇ ವ್ಯಕ್ತಿಯ ಆರೋಗ್ಯ ಸ್ಥಿತಿ ಕೂಡ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಅಸ್ಸಾಂ ಮೂಲದವರಾಗಿರುವ ಇವರ ಕುಟುಂಬದವರು ಮೃತದೇಹಗಳನ್ನು ತಮ್ಮ ಊರಿಗೆ ತೆಗೆದುಕೊಂಡು ಹೋಗಲು ಆರ್ಥಿಕವಾಗಿ ಅಷ್ಟೊಂದು ಶಕ್ತರಾಗಿಲ್ಲದಿರುವುದರಿಂದ ಇಲ್ಲಿಯೇ ಅಂತ್ಯಸಂಸ್ಕಾರ ನಡೆಸಲಾಯಿತು. ಮೃತಪಟ್ಟವರನ್ನು

ಬೆಂಗಳೂರು: ಖಾಸಗಿ ಆಸ್ಪತ್ರೆಗಳ ವೈದ್ಯರು ಮತ್ತು ರಾಜ್ಯ ಸರಕಾರದ ನಡುವಿನ ತಿಕ್ಕಾಟ ಒಂಬತ್ತು ಅಮಾಯಕರ ಜೀವಕ್ಕೆ ಕುತ್ತು ತಂದಿದೆ.ಖಾಸಗಿ ವೈದ್ಯಕೀಯ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಸೋಮವಾರದಿಂದಲೇ ಖಾಸಗಿ ವೈದ್ಯರು ಮುಷ್ಕರ ನಡೆಸಿದ್ದು, ರಾಜ್ಯಾದ್ಯಂತ ಆರೋಗ್ಯ ಸೇವೆಗಳಲ್ಲಿ ತೀವ್ರ ಅಡಚಣೆಯುಂಟಾ ಗಿದ್ದು, ಸರಿಯಾದ ಚಿಕಿತ್ಸೆ ಲಭ್ಯವಿಲ್ಲದೆ ಲಕ್ಷಾಂತರ ಮಂದಿ

ಮೈಸೂರು: ಇಲ್ಲಿನ ಹುಣಸೂರು ರಸ್ತೆಯ ಬಸರಿಕಟ್ಟೆ  ನಡುವೆ ಮಂಗಳವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಉಳ್ಳಾಲ ಮೂಲದ ಒಂದೇ ಕುಟುಂಬದ ಮೂವರು  ದಾರುಣವಾಗಿ ಸಾವನ್ನಪ್ಪಿದ್ದಾರೆ. ಟೆಂಪೋ ಟ್ರಾವೆಲರ್ ಲಾರಿಗೆ  ಹಿಂಬದಿಯಿಂದ ಗುದ್ದಿದ ಪರಿಣಾಮ ಅವಘಡ ನಡೆದಿದ್ದು, ಟೆಂಪೋ ದಲ್ಲಿದ್ದ 15 ಮಂದಿ ಪೈಕಿ ಮೂವರು ಸಾವನ್ನಪ್ಪಿದ್ದು 12 ಮಂದಿ ಗಾಯಗೊಂಡಿದ್ದಾರೆ. ಮೃತರು  ಹಮೀದ್(5೦), ಅವರ

ಮಂಗಳೂರು: ಹೆತ್ತವರನ್ನು ಕಳೆದುಕೊಂಡ ಇಬ್ಬರು ಹೆಣ್ಣು ಮಕ್ಕಳಿಗೆ ತಾಯ್ತನದ ಪ್ರೀತಿಯನ್ನು ಧಾರೆ ಎರೆದು, ಶಿಕ್ಷಣ ಹಾಗೂ ಸಾಧನೆಯ ದಾರಿಯಲ್ಲಿ ಬೆಂಗಾವಲಾಗಿ ನಿಂತ ಮಂಗಳೂರಿನ ದಂಪತಿಯೊಬ್ಬರ ಹೃದಯವಂತಿಕೆಯ ಕತೆಯಿದು. "ನನಗಾರಿಲ್ಲ' ಎಂದು ಬೇಸರಿಸಿ ಬೆಂಡಾದ ಎರಡು ಎಳೆಯ ಮನಸುಗಳು ಈ ದಂಪತಿಯ ಪರಿಶ್ರಮದ ಫಲವಾಗಿ ಪ್ರಸ್ತುತ ಸಾಧನೆಯ ಉತ್ತುಂಗದಲ್ಲಿದ್ದಾರೆ.ಮಂಗಳೂರಿನ ಉರ್ವ

ವಿಜಯವಾಡ: ಆಂಧ್ರ ಪ್ರದೇಶದ ಕೃಷ್ಣ ನದಿಯಲ್ಲಿ ಬೋಟ್ ಮುಳುಗಿ 14 ಮಂದಿ ಜಲಸಮಾಧಿಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೃಷ್ಣಾ ಜಿಲ್ಲೆ ಇಬ್ರಾಹಿಂ ಪಟ್ಟಣದಲ್ಲಿ ಈ ದುರ್ಘಟನೆ ನಡೆದಿದೆ. 35 ಪ್ರವಾಸಿಗರಿದ್ದ ಬೋಟ್ ಭವಾನಿ ಐಲ್ಯಾಂಡ್ ನಿಂದ ಪವಿತ್ರ ಸಂಗಮಕ್ಕೆ ಹೋಗುತ್ತಿದ್ದಾಗ ಮುಳುಗಿದ್ದು 14 ಪ್ರವಾಸಿಗರು ಜಲಸಮಾಧಿಯಾಗಿದ್ದು ಅವರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು

ಬೆಂಗಳೂರು: ಪತ್ರಕರ್ತೆ ಹಾಗೂ ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಭಾನುವಾರ ಮೂವರು ಶಂಕಿತರನ್ನು ಅಜ್ಞಾತ ಸ್ಥಳದಲ್ಲಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ  ಎಂದು ಹೇಳಲಾಗಿದೆ. ಮಾಧ್ಯಮವೊಂದು ವರದಿ ಮಾಡಿರುವಂತೆ ಎಸ್ ಐಟಿ ಮುಖ್ಯಸ್ಥ ಬಿಕೆ ಬಿಕೆ ಸಿಂಗ್ ನೇತೃತ್ವದಲ್ಲಿ ಉತ್ತರ ಕರ್ನಾಟಕ ಭಾಗದ ಮೂವರು ಶಂಕಿತರನ್ನು

ಮೂಡಬಿದಿರೆ: ಇಲ್ಲಿ ಶನಿವಾರ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ  ನಡೆದ 15ನೇ ವರ್ಷದ ಕೋಟಿ ಚೆನ್ನಯ ಹೊನಲು ಬೆಳಕಿನ ಜೋಡುಕರೆ ಕಂಬಳದಲ್ಲಿ ಕೋಣಗಳಿಗೆ ಹಿಂಸೆ ನೀಡಲಾಗಿದೆ ಎಂದು  ಪ್ರಾಣಿದಯಾ ಸಂಘ ತಕರಾರು ತೆಗೆದಿದೆ. ಸೋಮವಾರ ಸುಪ್ರೀಂ ಕೋರ್ಟ್‌ಗೆ ಕೋಣಗಳಿಗೆ ಹಿಂಸೆ ನೀಡಿದ ಬಗೆಗಿನ ಸಾಕ್ಷ್ಯ ಸಮೇತ ದೂರು ನೀಡುವುದಾಗಿ  ಪತ್ರಿಕಾ ಪ್ರಕಟಣೆ

ತಿರುವನಂತಪುರಂ : ಬಿಜೆಪಿ ಕೇರಳದಲ್ಲಿ ಜನರಕ್ಷಾ ಯಾತ್ರೆ ನಡೆಸಿದ ಬೆನ್ನಲ್ಲೇ ಭಾನುವಾರ ಹಾಡಹಗಲೇ  ಆರ್‌ಎಸ್‌ಎಸ್‌ ಕಾರ್ಯಕರ್ತನೊಬ್ಬನ ಬರ್ಬರ ಹತ್ಯೆ ನಡೆದಿದೆ. ತ್ರಿಶೂರ್‌ ಜಿಲ್ಲೆಯ ನೆನಮನಿಕ್ಕಾರ್‌ನಲ್ಲಿ ಆರ್‌ಎಸ್‌ಎಸ್‌ ಕಾರ್ಯಕರ್ತ ಆನಂದ್‌ ಎನ್ನುವವರು ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ  ದುಷ್ಕರ್ಮಿಗಳು  ಅಡ್ಡಗಟ್ಟಿ ಕೊಚ್ಚಿ ಕೊಲೆಗೈದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯದಲ್ಲೇ ಆನಂದ್‌ ಕೊನೆಯುಸಿರೆಳೆದಿದ್ದಾರೆ. ಸಿಪಿಎಂ ಕಾರ್ಯಕರ್ತನ ಕೊಲೆ