Log In
BREAKING NEWS >
ಉಗ್ರರ ಬಾ೦ಬ್ ಧಾಳಿಯಲ್ಲಿ ಹತರಾದ ಭಾರತೀಯ ಯೋಧರ ನಿಧನಕ್ಕೆ "ಕರಾವಳಿ ಕಿರಣ ಡಾಟ್ ಕಾ೦" ತೀವ್ರವಾದ ಸ೦ತಾಪವನ್ನು ಸೂಚಿಸಿದೆ.ಮಾತ್ರವಲ್ಲದೇ ಮೃತರ ಮನೆವರರಿಗೆ ದು:ಖವನ್ನು ಸಹಿಸುವ೦ತ ಶಕ್ತಿಯನ್ನು ದೇವರು ಕರುಣಿಸಲೆ೦ದು ಪ್ರಾರ್ಥಿಸುತ್ತದೆ... ...ಪಾಕ್‌ ಉಗ್ರ ನೆಲೆಗಳ ಸಂಪೂರ್ಣ ಧ್ವಂಸ:ವಿಶ್ವ ಹಿಂದೂ ಪರಿಷತ್‌ ಆಗ್ರಹ..

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ತಂಗ್ಧಾರ್'ನ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಅಪ್ರಚೋದಿತ ಗುಂಡಿನ ದಾಳಿಗೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಬುಧವಾರ ತಿಳಿದುಬಂದಿದೆ. ಪೇದೆ ಎಸ್.ಕೆ. ಮುರ್ಮು (28) ಹುತಾತ್ಮರಾದ ಯೋಧರಾಗಿದ್ದಾರೆ. ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡಿನ ದಾಳಿಗೆ ಮುರ್ಮು ಅವರು ಗಂಭೀರವಾಗಿ ಗಾಯಗೊಂಡಿದ್ದರು.

ನವದೆಹಲಿ: ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈರ್ ಸ್ಟಾರ್ ಡೈಮಂಡ್ಸ್ ಅಧ್ಯಕ್ಷ ವಿಫುಲ್ ಅಂಬಾನಿಯನ್ನು ಸಿಬಿಐ ಬಂಧಿಸಿದ್ದು ಈ ಪ್ರಕರಣದ ಮೊದಲ ಹೈಪ್ರೊಫೈಲ್ ಬಂಧನ ಇದಾಗಿದೆ. ವಿಫುಲ್ ಅಂಬಾನಿ ಅಂಬಾನಿ ಸಹೋದರರ ಸಂಬಂಧಿಯಾಗಿದ್ದು, ಈ ಪ್ರಕರಣದಲ್ಲಿ ವಿಫುಲ್ ಅಂಬಾನಿಯನ್ನು ಬಂಧಿಸಿರುವುದಕ್ಕೂ ಅಂಬಾನಿ ಸಹೋದರರು ಅಥವಾ ಅವರ ಸಂಸ್ಥೆಗಳು ಶಾಮೀಲಾಗಿರುವುದರ

ಪಣಂಬೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಉದ್ದೇಶಿಸಿ ಮಾತನಾಡಿದ ಸಮಾವೇಶವನ್ನು ಮುಗಿಸಿ ವಾಪಸ್ ಬರುತ್ತಿದ್ದ ಬಿಜೆಪಿ ಕಾರ್ಯಕರ್ತರ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿರುವ ಘಟನೆ ಮಂಗಳೂರಿನ ಬೆಂಗೆರೆ ಗ್ರಾಮದ ಬಳಿ ನಡೆದಿದೆ. ಮಲ್ಪೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಮೀನುಗಾರರ ಸಮಾವೇಶವನ್ನುದ್ದೇಶಿಸಿ ಮಾತನಾಡಿದರು. ಈ ಸಮಾವೇಶವನ್ನು ಮುಕ್ತಾಯಗೊಳಿಸಿಕೊಂಡು ವಾಪಸ್ಸಾಗುತ್ತಿದ್ದ ಬಿಜೆಪಿ

ಮಂಗಳೂರು: ದಕ್ಷಿಣ ಕನ್ನಡ‌ ಜಿಲ್ಲೆಯ ಸುಳ್ಯದಲ್ಲಿ ಪದವಿ ವಿದ್ಯಾರ್ಥಿನಿಯೊಬ್ಬಳನ್ನು ಆಕೆಯ ಸಹಪಾಠಿಯೇ ಪ್ರೀತಿಸಲು ಒಪ್ಪಲಿಲ್ಲ ಎಂಬ ಕಾರಣಕ್ಕೆ ಚೂರಿಯಿಂದ ಇರಿದು ಕೊಲೆ ಮಾಡಿದ್ದಾನೆ. ಸುಳ್ಯ ಎನ್‌ಎಂಸಿ ಕಾಲೇಜಿನ ದ್ವಿತೀಯ ಬಿಎಸ್ಸಿ ಪದವಿ ವಿದ್ಯಾರ್ಥಿನಿ ಅಕ್ಷತಾ ಕೊಲೆಯಾದವರು. ಇದೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿ, ನೆಲ್ಲೂರು ಕೆಮ್ರಾಜೆ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರ

ಮಂಗಳೂರು: ರಾಜ್ಯದಲ್ಲಿ ಗೂಂಡಾ ಸರಕಾರ ಆಳ್ವಿಕೆಯಲ್ಲಿದೆ. ಈ ಗೂಂಡಾ ಸರ್ಕಾರ ಅಂತ್ಯವಾಗಬೇಕಿದೆ. ಸಿಎಂ ಹಾಗೂ ಈ ಸರಕಾರವನ್ನು ಕಿತ್ತೊಗೆಯಲು ರಾಜ್ಯದ ಜನ ವಿಧಾನಸಭಾ ಚುನಾವಣೆಗಾಗಿ ಕಾಯುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.ಮಂಗಳವಾರ ಚುನಾವಣಾ ಪ್ರಚಾರ ಹಿನ್ನೆಲೆಯಲ್ಲಿ ಮೂರು ದಿನಗಳ ರಾಜ್ಯ

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮಹಮ್ಮದ್ ನಲಪಾಡ್ ರೌಡಿಸಂ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ಲೆಗೊಳಗಾಗಿದ್ದ ಯುವಕ ವಿದ್ವತ್ ಮೇಲೆಯೂ ಪೊಲೀಸರು ಎಫ್ಐಆರ್ ದಾಖಲಿಸಿಕೊಂಡಿದ್ದಾರೆಂದು ಮಂಗಳವಾರ ತಿಳಿದುಬಂದಿದೆ. ಫೆ.17ರಂದು ವಿದ್ವತ್ ತನ್ನ ಸ್ನೇಹಿತರೊಂದಿಗೆ ಊಟ ಮಾಡಲು ಯು.ಬಿ.ಸಿಟಿಗೆ ಬಂದಿದ್ದರು. ಈ ವೇಳೆ ವಿದ್ವತ್ ಹಾಗೂ ನಲಪಾಡ್ ನಡುವೆ ಮಾತಿನ ಚಕಮಕಿ ನಡೆದಿದೆ.

ಶ್ರವಣಬೆಳಗೊಳ: ಪ್ರಧಾನಿ ನರೇಂದ್ರ ಮೋದಿ ಶ್ರವಣಬೆಳಗೊಳಕ್ಕೆ ಆಗಮಿಸಿರುವುದು ಸುವರ್ಣಾಕ್ಷರದಲ್ಲಿ ಬರೆದಿಡುವ ಕ್ಷಣ ಎಂದು ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹೇಳಿದ್ದಾರೆ.ಮಹಾಮಜ್ಜನ ಕಾರ್ಯಕ್ರಮವನ್ನು ರಾಷ್ಟ್ರಪತಿಯಿಂದ ಉದ್ಘಾಟಿಸಬೇಕೆಂಬ ಬಯಕೆ ಇತ್ತು. ಅದರಂತೆ ರಾಷ್ಟಪತಿ ರಾಮನಾಥ ಕೋವಿಂದ್‌ ಆಗಮಿಸಿ ಮಹಾಮಜ್ಜನಕ್ಕೆ ಚಾಲನೆ ನೀಡಿದರು.ವಿಂಧ್ಯಗಿರಿ ಬೆಟ್ಟಕ್ಕೆ ಹೊಸದಾಗಿ ಮೆಟ್ಟಿಲು ಮಾಡಿಸಬೇಕೆಂದು ಕೇಂದ್ರ ಸಂಸ್ಕೃತಿ ಸಚಿವರನ್ನು

ಪಾಂಡವಪುರ: ರೈತ ಚಳವಳಿಗೆ ಬೆನ್ನೆಲುಬಾಗಿದ್ದ ಶಾಸಕ ಕೆ.ಎಸ್‌.ಪುಟ್ಟಣ್ಣಯ್ಯನವರ ಸಾವಿನಿಂದ ಹೋರಾಟದ ಪ್ರಬಲ ಶಕ್ತಿಯೊಂದು ಕ್ಷೀಣಿಸಿದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಷಾದಿಸಿದರು.ಅಗಲಿದ ಗೆಳೆಯ ಶಾಸಕ ಪುಟ್ಟಣ್ಣಯ್ಯನವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕಾಗಿ ಸಿಎಂ ಸಿದ್ದರಾಮಯ್ಯ ಮೈಸೂರಿನಿಂದ ಕ್ಯಾತನಹಳ್ಳಿಗೆ ಸೋಮವಾರ ಆಗಮಿಸಿದ್ದರು. ಬೆಳಗ್ಗೆ 11.30ರ ವೇಳೆಗೆ ಮೈಸೂರಿನಿಂದ ಆಗಮಿಸಿದ ಸಿದ್ದರಾಮಯ್ಯ, ಪುಟ್ಟಣ್ಣಯ್ಯರ ಪಾರ್ಥಿವ ಶರೀರಕ್ಕೆ ಪುಷ್ಪಗುತ್ಛ ಇರಿಸಿ ನಮನ ಸಲ್ಲಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ,

ಮಂಗಳೂರು: ರಾಜ್ಯ ಸರಕಾರದಿಂದ ಒಪ್ಪಿಗೆ ಪಡೆದು ಕೇಂದ್ರಕ್ಕೆ ರವಾನೆಯಾಗಿದ್ದ ಪ‌ರಿಷ್ಕೃತ ಕಂಬಳ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ.ಮುಂದಿನ ಕೆಲವೇ ದಿನಗಳಲ್ಲಿ ಅದು ಗೃಹ ಸಚಿವಾಲಯದ ಮೂಲಕ ರಾಜ್ಯ ಸರಕಾರಕ್ಕೆ ಮರಳಿ ಕಾನೂನು ಆಗಿ ಜಾರಿಗೊಳ್ಳಲಿದೆ. ಹೀಗಾಗಿ ಭವಿಷ್ಯ ದಲ್ಲಿ ಕಂಬಳ ಕ್ರೀಡೆ ಆಯೋಜಿಸಲು ಯಾವುದೇ ಕಾನೂನು ತೊಡಕು ಎದುರಾಗದು. ಇದು

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ಮಾನ್ಯ ಅಮಿತ್ ಶಾ ಅವರ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭೇಟಿ ಸಫಲವಾಗಲಿ ಎಂದು ಕೋರಿ ನಿನ್ನೆ ಕೃಷ್ಣ ದರ್ಶನ ಮಾಡಿ ಪರ್ಯಾಯ ಮಠಾಧೀಶರನ್ನು ಭೇಟಿಯಾಗಿ ಅವರು ಪ್ರಾರ್ಥನೆ ಸಲ್ಲಿಸಿ ಅನುಗ್ರಹ ಮಂತ್ರಾಕ್ಷತೆ ನೀಡಿದರು. ಪಕ್ಷಕ್ಕೆ ಹೊಸ ಹುರುಪು, ಚೈತನ್ಯ ಅವರ ಈ ಯಾತ್ರೆಯಿಂದ