Log In
BREAKING NEWS >
ವೇತನ ಹೆಚ್ಚಳ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮೇ 30 ಮತ್ತು 31ರಂದು ಬ್ಯಾಂಕ್‌ ನೌಕರರು ರಾಷ್ಟ್ರವ್ಯಾಪಿ ಮುಷ್ಕರ ನಡೆಸಲಿದ್ದಾರೆ....

ಹೊಸದಿಲ್ಲಿ : 2019ರ ಲೋಕಸಭಾ ಚುನಾವಣೆಗೆ ಬಹುಜನ ಸಮಾಜ ಪಕ್ಷದ ಪ್ರಧಾನಿ ಹುದ್ದೆ ಅಭ್ಯರ್ಥಿಯಾಗಿ ಪಕ್ಷದ ಮುಖ್ಯಸ್ಥೆ ಮಾಯಾವತಿ ಅವರನ್ನು ಬಿಎಸ್‌ಪಿ ಬಿಂಬಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ.ಇಂದು ಶನಿವಾರ ನಡೆಯಲಿರುವ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಲ್ಲಿ ಈ ವಿಷಯ ಚರ್ಚೆಗೆ ಬರಲಿದೆ ಎನ್ನಲಾಗಿದೆ. ಪ್ರಕೃತ ಲೋಕಸಭೆಯಲ್ಲಿ ಬಿಎಸ್‌ಪಿ

ಪಣಜಿ: ದಕ್ಷಿಣ ಗೋವಾದ ಬೀಚ್‌ವೊಂದರಲ್ಲಿ ಯುವತಿಯೊಬ್ಬಳ ಮೇಲೆ ಆಕೆಯ ಪ್ರಿಯಕರನ ಎದುರೇ ಮೂವರು ಕಾಮುಕರು ಗ್ಯಾಂಗ್‌ರೇಪ್‌ ನಡೆಸಿದ ಹೇಯ ಘಟನೆ ಗುರುವಾರ ರಾತ್ರಿ ನಡೆದಿದೆ.ವಿಹರಿಸುತ್ತಿದ್ದ ಜೋಡಿಯನ್ನು ಕಾಮುಕರು ಹಿಡಿದು ವಿವಸ್ತ್ರಗೊಳಿಸಿ ಫೋಟೋ ಮತ್ತು ವಿಡಿಯೋಗಳನ್ನು ಚಿತ್ರೀಕರಿಸಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಬಳಿಕ ಸರದಿಯಂತೆ ಅತ್ಯಾಚಾರ ನಡೆಸಿ ಪರಾರಿಯಾಗಿದ್ದಾರೆ ಎಂದು ಪೊಲೀಸರು

ಶ್ರೀನಗರ : ಶನಿವಾರ ನಸುಕಿನ ವೇಳೆ ಪಾಕಿಸ್ಥಾನ ಕಡೆಯಿಂದ ಭಾರತದ ಗಡಿಯೊಳಗೆ ನುಸುಳುವ ಉಗ್ರರ ತಂಡದ ಯತ್ನವನ್ನು ಭಾರತೀಯ ಸೇನೆ ವಿಫ‌ಲಗೊಳಿಸಿದ್ದು, ಗುಂಡಿನ ಮಳೆಗೆರೆದು ಐವರು ಉಗ್ರರನ್ನು ಹತ್ಯೆಗೈದಿದ್ದಾರೆ.ಉಗ್ರರ ತಂಡದಲ್ಲಿ ಎಷ್ಟು ಮಂದಿ ಇದ್ದರು ಎನ್ನುವುದು ತಿಳಿದು ಬಂದಿಲ್ಲ ಆದರೆ ಐವರನ್ನು ಸೇನಾ ಪಡೆಗಳು ಹತ್ಯೆಗೈದು ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು

ಮಂಗಳೂರು: ಎತ್ತಿನಹೊಳೆ ಯೋಜನೆಯ ಮೂಲಕ ಬಯಲು ಸೀಮೆ ಜಿಲ್ಲೆಗಳಿಗೆ ನಿರೀಕ್ಷಿತ ನೀರು ಲಭ್ಯವಾಗುವುದಿಲ್ಲ ಎಂದು ವಿಜ್ಞಾನಿಗಳು, ನೀರಾವರಿ ತಜ್ಞರು ಹಾಗೂ ಪರಿಣತರು ಹೇಳುತ್ತಿದ್ದರೂ ಯಾವುದನ್ನೂ ಲೆಕ್ಕಿಸದೆ ಯೋಜನೆಗೆ ಮುಂದಾದ ಸರಕಾರಕ್ಕೆ ಇದೀಗ ದೊಡ್ಡ ಕಂಟಕವೊಂದು ಎದುರಾಗಿದೆ. ಯೋಜನೆಯ ಬಗ್ಗೆ ವಿಚಾರಣೆ ಕೈಗೊಂಡಿರುವ ರಾಷ್ಟ್ರೀಯ ಹಸಿರು ಪೀಠದ ಆದೇಶದಂತೆ ಕಾಮಗಾರಿ ಕೈಗೊಳ್ಳುವ

ಕೋಲ್ಕತಾ: ಜಿದ್ದಾಜಿದ್ದಿನ ಹೋರಾಟ ನಡೆದ 2ನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಆತಿಥೇಯ ಕೋಲ್ಕತಾ ನೈಟ್‌ ರೈಡರ್ಸ್‌ ನಿರಾಶೆಯ ಕಡಲಲಿ ಮುಳುಗಿತು. ಕಡೆಯ ಹಂತದಲ್ಲಿ 13 ರನ್‌ಗಳಿಂದ ಗೆದ್ದ ಸನ್‌ರೈಸರ್ಸ್‌ ಹೈದರಾಬಾದ್‌ ಫೈನಲ್‌ಗೇರಿತು. ಮೇ 27ರಂದು ಮುಂಬೈನಲ್ಲಿ ನಡೆಯುವ ಅಂತಿಮ ಪಂದ್ಯದಲ್ಲಿ ಅದು ಧೋನಿ ನೇತೃತ್ವದ ಚೆನ್ನೈ ಕಿಂಗ್ಸ್‌ ತಂಡವನ್ನು ಎದುರಿಸಲಿದೆ.ಮೊದಲನೇ ಕ್ವಾಲಿಫೈಯರ್‌ ಪಂದ್ಯದಲ್ಲಿ ಚೆನ್ನೈ ಕಿಂಗ್ಸ್‌ ವಿರುದ್ಧ ಸೋತು ಫೈನಲ್‌ಗೇರುವ

ಬೆಂಗಳೂರು: ಜೆಡಿಎಸ್‌-ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಶುಕ್ರವಾರ ಬಹುಮತ ಸಾಬೀತುಪಡಿಸಿದ್ದು, ಇದರೊಂದಿಗೆ ಸರ್ಕಾರ ಅಧಿಕೃತವಾಗಿ ಕಾರ್ಯಾರಂಭ ಮಾಡುವಂತಾಗಿದೆ. ಇದರ ಬೆನ್ನಲ್ಲೇ ಹೊಸ ಸರ್ಕಾರಕ್ಕೆ ಹಲವು ಸವಾಲುಗಳು ಎದುರಾಗಿದೆ.ಚುನಾವಣಾ ಪೂರ್ವದಲ್ಲಿ ಹೇಳಿದಂತೆ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರೈತರ ಕೃಷಿ ಸಾಲವನ್ನು ಸಂಪೂರ್ಣ ಸಾಲ ಮನ್ನಾ ಮಾಡುವ ಕುರಿತು ಸಂಜೆಯೊಳಗೆ

ಬೆಂಗಳೂರು: ರಾಜ್ಯ ವಿಧಾನಸಭೆ ನೂತನ ಸಭಾಧ್ಯಕ್ಷರಾಗಿ ಕಾಂಗ್ರೆಸ್‌ನ  ಶ್ರೀನಿವಾಸಪುರ ಶಾಸಕ ರಮೇಶ್‌ಕುಮಾರ್‌ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಬಿಜೆಪಿಯಿಂದ ನಾಮಪತ್ರ ಸಲ್ಲಿಸಿದ್ದ ಸುರೇಶ್‌ಕುಮಾರ್‌ ಕೊನೇ ಕ್ಷಣದಲ್ಲಿ ಕಣದಿಂದ ಹಿಂದೆ ಸರಿದ ಪರಿಣಾಮ ರಮೇಶ್‌ಕುಮಾರ್‌ ಸರ್ವಾನುಮತದಿಂದ ಆಯ್ಕೆಯಾದರು.ಶುಕ್ರವಾರ ವಿಧಾನಸಭೆಯಲ್ಲಿ ಹಂಗಾಮಿ ಸ್ಪೀಕರ್‌ ಕೆ.ಜೆ.ಬೋಪಯ್ಯ ಅವರು ಸ್ಪೀಕರ್‌ ಆಯ್ಕೆ ಪ್ರಕ್ರಿಯೆ ಪ್ರಾರಂಭಿಸಿದಾಗ  ಸುರೇಶ್‌ ಕುಮಾರ್‌ ಅವರ

ಬೆಂಗಳೂರು/ಮಂಗಳೂರು: ನಿರೀಕ್ಷೆಯಂತೆ ಮುಂಗಾರು ಅಂಡಮಾನ್‌ನ ದಕ್ಷಿಣ ಭಾಗಕ್ಕೆ ಅಪ್ಪಳಿಸಿದ್ದು, ಇನ್ನೆರಡು ದಿನಗಳಲ್ಲಿ ಕೇರಳದ ಕರಾವಳಿ ತೀರಕ್ಕೆ ಆಗಮಿಸುವ ಮುನ್ಸೂಚನೆಯಿದೆ.ಹೀಗಾಗಿ, ಕರಾವಳಿ ಭಾಗದಲ್ಲಿ ಜೂನ್‌ ಮೊದಲ ವಾರ ಮುಂಗಾರು ಮಾರುತ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಮಧ್ಯೆ, ಶುಕ್ರವಾರ ಮುಂಜಾನೆ 8.30ಕ್ಕೆ ಅಂತ್ಯಗೊಂಡ 24 ತಾಸುಗಳ ಅವಧಿಯಲ್ಲಿ ಕೊಡಗು ಜಿಲ್ಲೆಯ

ಬೆಂಗಳೂರು: ವಿಶ್ವಾಸಮತಕ್ಕೂ ಮುನ್ನ ಸ್ಪೀಕರ್ ಸ್ಥಾನಕ್ಕೆ ಭಾರಿ ಪೈಪೋಟಿ ನಡೆಯುತ್ತಿದ್ದು, ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ನಾಮಪತ್ರ ಸಲ್ಲಿಕೆ ಮಾಡಿರುವ ರಮೇಶ್ ಕುಮಾರ್ ಅವರ ಆಯ್ಕೆ ಬಹುತೇಕ ಖಚಿತ ಎಂದು ಹೇಳಲಾಗುತ್ತಿದೆ.ವಿಶ್ವಾಸಮತ ಯಾಚನೆಗೂ ಮುನ್ನ ನೂತನ ಸ್ಪೀಕರ್ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಹಿರಿಯ ಕಾಂಗ್ರೆಸ್ ಶಾಸಕ ರಮೇಶ್ ಕುಮಾರ್ ನೂತನ ಸ್ಪೀಕರ್ ಆಗಿ

ಬಣ್ಣಗಳ ಮೇಲಿನ ಆಕರ್ಷನೆ, ನಟನೆ ಮೇಲಿದ್ದ ಪ್ರೀತಿ ದಂತ ವೈದ್ಯೆಯಾಗಿದ್ದ ನೀತು ಗೌಡ ಅವರನ್ನು ಚಿತ್ರರಂಗದತ್ತ ಆಕರ್ಷಿತರಾಗುವಂತೆ ಮಾಡಿತು.ಚಿಕ್ಕಂದಿನಿಂದಲೂ ಮೇಕಪ್ ಹಾಗೂ ಫ್ಯಾಷನ್ ಬಗ್ಗೆ ಅತೀಯಾದ ಪ್ರೀತಿ ಬೆಳೆಸಿಕೊಂಡಿದ್ದ ನೀತುರ ಅವರಿಗೆ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಅವರ ಅಮ್ಮ ಸ್ಪೂರ್ತಿಯಾಗಿದ್ದಾರೆ. ಅಪ್ಪನ ಬಯಕೆಯಂತೆಯೇ ದಂತ ವೈದ್ಯಕೀಯ ಶಿಕ್ಷಣ ಪೂರ್ಣಗೊಳಿಸಿದ್ದ ನೀತು